ಪುತ್ತೂರು: ನಳಿನ್, ಸದಾನಂದ ಗೌಡ ಫೋಟೋಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ;
ಚಪ್ಪಲಿಯ ಹಾರ ಹಾಕಿ ಬ್ಯಾನರ್ ಅಳವಡಿಕೆ

Prasthutha|

- Advertisement -

ಪುತ್ತೂರು: ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ಗೆ ಚಪ್ಪಲಿಯ ಹಾರ ಹಾಕಿ‌ ಭಾವಪೂರ್ಣ ಶ್ರದ್ಧಾಂಜಲಿ ಬರೆದಿರುವ ಘಟನೆ ಎಂದು ಬರೆದು, ಚಪ್ಪಲಿ ಹಾರ ಹಾಕಿರುವ ಬ್ಯಾನರ್ ಅನ್ನು ಅಳವಡಿಸಿರುವ ಘಟನೆ ಪುತ್ತೂರು ಸರ್ಕಾರಿ ಬಸ್ ನಿಲ್ದಾಣದ ಮುಂಭಾಗದಲ್ಲಿ ನಡೆದಿದೆ.

‘ಭಾರತೀಯ ಜನತಾ ಪಾರ್ಟಿಯ ಪುತ್ತೂರು ಮೂಲದ ನಾಯಕರಾಗಿರುವ ಮಾಜಿ ಸಿಎಂ ಸದಾನಂದ ಗೌಡ ಹಾಗೂ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ರವರ ಭಾವಚಿತ್ರವಿರುವ ಬ್ಯಾನರ್ ನಲ್ಲಿ ಬಿಜೆಪಿ ಹೀನಾಯವಾಗಿ ಸೋಲಲು ಕಾರಣಕರ್ತರಾದ ನಿಮಗೆ ಭಾವಪೂರ್ಣ ಶ್ರದ್ಧಾಂಜಲಿ, ನೊಂದ ಹಿಂದೂ ಕಾರ್ಯಕರ್ತರು’ ಎಂದು ಬರೆಯಲಾಗಿದೆ.

- Advertisement -

ಅಷ್ಟೇ ಅಲ್ಲದೇ ಈ ಬ್ಯಾನರ್ ಗೆ ಚಪ್ಪಲಿ ಹಾರವನ್ನು ಹಾಕಲಾಗಿದೆ. ಈ ಬ್ಯಾನರ್ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Join Whatsapp