Home ಟಾಪ್ ಸುದ್ದಿಗಳು ಕಾಮನ್‌ವೆಲ್ತ್‌ ನಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದ ಪಿವಿ ಸಿಂಧು

ಕಾಮನ್‌ವೆಲ್ತ್‌ ನಲ್ಲಿ ಚೊಚ್ಚಲ ಚಿನ್ನದ ಪದಕ ಗೆದ್ದ ಪಿವಿ ಸಿಂಧು

ಭಾರತದ ಸ್ಟಾರ್‌ ಶಟ್ಲರ್‌, ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಪಿವಿ ಸಿಂಧು ಕಾಮನ್‌ವೆಲ್ತ್‌ ಕ್ರೀಡಾಕೂಟದಲ್ಲಿ ತಮ್ಮ ಮೊದಲ ಚಿನ್ನದ ಪದಕವನ್ನು ಕೊರಳಿಗೇರಿಸಿಕೊಂಡಿದ್ದಾರೆ.  

ಮಹಿಳಾ ಸಿಂಗಲ್ಸ್‌ನ ಫೈನಲ್‌ನಲ್ಲಿ ಸಿಂಧು ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಅಂತರದಿಂದ ನೇರ ಸೆಟ್‌ಗಳಿಂದ ಸೋಲಿಸಿ ಚಿನ್ನದ ಪದಕವನ್ನು ಗೆದ್ದರು.

ಭಾನುವಾರ ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಸಿಂಧು,  ಸಿಂಗಾಪುರದ ಯೆವೊ ಜಿಯಾ ಮಿನ್ ವಿರುದ್ಧ 21-19, 21-17 ಅಂತರದಲಿ 49 ನಿಮಿಷಗಳಲ್ಲೇ ಗೆಲುವು ದಾಖಲಿಸಿದರು. ಈ ಮೂಲಕ ಸತತ 2ನೇ ಆವೃತ್ತಿಯಲ್ಲಿ ಫೈನಲ್‌ಗೇರಿದರು. ಕಳೆದ ಆವೃತ್ತಿಯ ಫೈನಲ್‌ನಲ್ಲಿ ಸಿಂಧು, ಸೈನಾ ನೆಹ್ವಾಲ್ ವಿರುದ್ಧ ಸೋತು ಬೆಳ್ಳಿಗೆ ತೃಪ್ತಿಪಟ್ಟಿದ್ದರು.

Join Whatsapp
Exit mobile version