ದೆಹಲಿಯಿಂದ ಹೊರಟ ವಿಮಾನದಲ್ಲಿ ಹೊಗೆ: ಕರಾಚಿಯಲ್ಲಿ ತುರ್ತು ಲ್ಯಾಂಡಿಂಗ್

Prasthutha|

ಕರಾಚಿ: ಇಂದು ಬೆಳಗ್ಗೆ ದೆಹಲಿಯಿಂದ ದೋಹಾಕ್ಕೆ ಹೊರಟ್ಟಿದ್ದ ಕತಾರ್ ಏರ್ ವೇಸ್ ವಿಮಾನದಲ್ಲಿ ಹೊಗೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಾಕಿಸ್ತಾನದ ಕರಾಚಿಯಲ್ಲಿ ವಿಮಾನವನ್ನು ತುರ್ತು ಲ್ಯಾಂಡಿಂಗ್ ಮಾಡಲಾಗಿದೆ.

- Advertisement -

ಕತಾರ್ ಏರ್ ವೇಸ್ ಕಂಪೆನಿಯ QR579 ವಿಮಾನದ ಕಾರ್ಗೋ ಹೋಲ್ಡ್ ನಲ್ಲಿ ಹೊಗೆ ಕಾಣಿಸಿಕೊಂಡಿದ್ದು, ತುರ್ತಾಗಿ ಕರಾಚಿಯಲ್ಲಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಸಂಸ್ಥೆ, ತುರ್ತು ಪರಿಸ್ಥಿತಿಯಿಂದಾಗಿ ವಿಮಾನವನ್ನು ಕರಾಚಿಯಲ್ಲಿ ಸುರಕ್ಷಿತವಾಗಿ ಇಳಿಸಲಾಗಿದ್ದು, ಸದ್ಯ ಅಲ್ಲಿ ತುರ್ತು ಸೇವೆಯನ್ನು ಒದಗಿಸಲಾಗಿದೆ. ಮೆಟ್ಟಿಲುಗಳನ್ನು ಬಳಸಿ ಪ್ರಯಾಣಿಕರನ್ನು ಕ್ರಮಬದ್ಧವಾಗಿ ಇಳಿಸಲಾಗಿದೆ ಎಂದು ತಿಳಿಸಿದೆ.

- Advertisement -

ಘಟನೆಯ ಕುರಿತು ತನಿಖೆ ನಡೆಯುತ್ತಿದ್ದು, ಪ್ರಯಾಣಿಕರು ಅನುಭವಿಸಿದ ಅನಾನುಕೂಲತೆಗಾಗಿ ಕ್ಷಮೆಯಾಚಿಸುತ್ತೇವೆ ಮತ್ತು ಮುಂದಿನ ಪ್ರಯಾಣಕ್ಕೆ ನೆರವು ಒದಗಿಸಲಾಗುವುದೆಂದು ವಿಮಾನಯಾನ ಸಂಸ್ಥೆ ಹೇಳಿದೆ. ಪ್ರಯಾಣಿಕರು ದೋಹಾಕ್ಕೆ ಪ್ರಯಾಣಿಸಲು ಬದಲಿ ವಿಮಾನವನ್ನು ವ್ಯವಸ್ಥೆಗೊಳಿಸಲಾಗಿದೆ.

Join Whatsapp