ಕತಾರ್​: ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಬಿಡುಗಡೆ

Prasthutha|

ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಕತಾರ್​ನಿಂದ ಭಾರತಕ್ಕೆ ಮರಳಿದ್ದಾರೆ.

- Advertisement -

ಕತಾರ್ ನ್ಯಾಯಾಲಯವು ಸೋಮವಾರ ತನ್ನ ವಶದಲ್ಲಿದ್ದ ಎಲ್ಲಾ 8 ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಕತಾರ್‌ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

Join Whatsapp