Home ಟಾಪ್ ಸುದ್ದಿಗಳು ಕತಾರ್​: ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಬಿಡುಗಡೆ

ಕತಾರ್​: ಮರಣದಂಡನೆ ಶಿಕ್ಷೆಗೆ ಗುರಿಯಾಗಿದ್ದ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಬಿಡುಗಡೆ

ನವದೆಹಲಿ: ಬೇಹುಗಾರಿಕೆ ಆರೋಪದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿದ್ದ 8 ಮಂದಿ ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳು ಕತಾರ್​ನಿಂದ ಭಾರತಕ್ಕೆ ಮರಳಿದ್ದಾರೆ.

ಕತಾರ್ ನ್ಯಾಯಾಲಯವು ಸೋಮವಾರ ತನ್ನ ವಶದಲ್ಲಿದ್ದ ಎಲ್ಲಾ 8 ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆ ಮಾಡಿದೆ. ಅದರಲ್ಲಿ 7 ಮಂದಿ ಭಾರತಕ್ಕೆ ಮರಳಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.

ಕತಾರ್‌ನಲ್ಲಿ ಬಂಧಿತರಾಗಿರುವ ದಹ್ರಾ ಗ್ಲೋಬಲ್ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಎಂಟು ಭಾರತೀಯ ಪ್ರಜೆಗಳ ಬಿಡುಗಡೆಯನ್ನು ಭಾರತ ಸರ್ಕಾರ ಸ್ವಾಗತಿಸುತ್ತದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಹೇಳಿದೆ.

Join Whatsapp
Exit mobile version