ಗೆಳೆಯರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯ

ಚಿಕ್ಕಮಗಳೂರು: ಹಣಕಾಸಿನ ವಿಚಾರದಲ್ಲಿ ಸ್ನೇಹಿತರ ಮಧ್ಯೆ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಘಟನೆ  ತರೀಕೆರೆ ಪಟ್ಟಣದ ಎಪಿಎಂಸಿ ಯಾರ್ಡ್ ನಲ್ಲಿ ನಡೆದಿದೆ.

ಓಂಕಾರ (30) ಮೃತ ದುರ್ದೈವಿ. ರಾತ್ರಿ ಮನೆಯಲ್ಲಿದ್ದ ಓಂಕಾರನನ್ನು ಕರೆದುಕೊಂಡು ಹೋದ ಸ್ನೇಹಿತರು ಕೊಲೆ ಮಾಡಿದ್ದಾರೆ ಎಂದು ಮನೆಯವರು ಆರೋಪಿಸಿದ್ದಾರೆ.

- Advertisement -

ಆರೋಪಿಗಳ ತಂಡದಲ್ಲಿ ಒಟ್ಟು ಐದು ಮಂದಿಯಿದ್ದು ಸುನೀಲ್, ಸಂತೋಷ್, ಧನರಾಜ್ ಎಂಬ ಮೂವರನ್ನು  ಬಂಧಿಸಲಾಗಿದೆ. ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,ಇಬ್ಬರಿಗಾಗಿ ಶೋಧಕಾರ್ಯ ಮುಂದುವರಿದಿದೆ.