ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ಯುಪಿಯ 24 ಜಿಲ್ಲೆಗಳಲ್ಲಿ ಪರೀಕ್ಷೆ ರದ್ದು

Prasthutha|

ಲಕ್ನೋ:   ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಬುಧವಾರ ಉತ್ತರ ಪ್ರದೇಶದ 24 ಜಿಲ್ಲೆಗಳಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನು ರದ್ದುಮಾಡಲಾಗಿದೆ ಎಂದು ಮಾಧ್ಯಮಿಕ ಶಿಕ್ಷಣ ಪರಿಷತ್ ತಿಳಿಸಿದೆ.

- Advertisement -

‘ಬಲ್ಲಿಯಾ ಜಿಲ್ಲೆಯಲ್ಲಿ 12ನೇ ತರಗತಿಯ ಇಂಗ್ಲಿಷ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ತಿಳಿದು ಬಂದಿದೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವೆ ಗುಲಾಬ್ ದೇವಿ ತಿಳಿಸಿದ್ದಾರೆ.

ಬುಧವಾರ ಮಧ್ಯಾಹ್ನ 2 ಗಂಟೆಯಿಂದ ಪರೀಕ್ಷೆ ನಡೆಯಬೇಕಿತ್ತು. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಪತ್ತೆಯಾದ ಬೆನ್ನಲ್ಲೇ ಪೊಲೀಸರು ದೂರು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -

ಸೋರಿಕೆಯಾಗಿರುವ ಪ್ರಶ್ನೆ ಪತ್ರಿಕೆಗಳನ್ನು ಕೇವಲ 24 ಜಿಲ್ಲೆಗಳಲ್ಲಿ ಮಾತ್ರ ಹಂಚಿಕೆಯಾಗಿರುವುದರಿಂದ ಉಳಿದ 51 ಜಿಲ್ಲೆಗಳಲ್ಲಿ ಎಂದಿನಂತೆ ಇಂಗ್ಲಿಷ್ ಪರೀಕ್ಷೆ ನಡೆಯುತ್ತಿದೆ ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಮಾಧ್ಯಮಿಕ ಶಿಕ್ಷಣ) ಆರಾಧನಾ ಶುಕ್ಲಾ ತಿಳಿಸಿದ್ದಾರೆ.



Join Whatsapp