ಪ್ರಶ್ನೆಪತ್ರಿಕೆ ಸೋರಿಕೆ: ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ

Prasthutha|

ಪಟ್ನಾ: ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಪ್ರಹಾರ ನಡೆಸಿ ಚದುರಿಸಿದ್ದಾರೆ.ಲಾಠಿ ಚಾರ್ಜ್ ನಿಂದ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.

- Advertisement -


ಪ್ರಶ್ನೆಪತ್ರಿಕೆ ಸೋರಿಕೆಯ ವಿಚಾರ ತಿಳಿದ ಬಳಿಕ ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್ (ಬಿಎಸ್’ಎಸ್ಸಿ) ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಬಿಹಾರ ಪೊಲೀಸರು ಲಾಠಿ ಪ್ರಹಾರ ನಡೆಸಿದರು.


ಈ ಬಗ್ಗೆ ಮಾತನಾಡಿದ ಪಾಟ್ನಾದ ವಿಶೇಷ ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಎಂ.ಎಸ್.ಖಾನ್, ವಿದ್ಯಾರ್ಥಿಗಳು ಹಿಂಸಾಚಾರ ಮತ್ತು ವಿಧ್ವಂಸಕತೆಯನ್ನು ಪ್ರಾರಂಭಿಸಿದರು ಮತ್ತು ಅದನ್ನು ನಿಯಂತ್ರಿಸಲು ಲಾಠಿ ಚಾರ್ಜ್ ನಡೆಸಬೇಕಾಯಿತು. ಅಲ್ಲದೆ ಕೆಲವರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

- Advertisement -


ಬಿಹಾರ ಸ್ಟಾಫ್ ಸೆಲೆಕ್ಷನ್ ಕಮಿಷನ್, ಬಿಎಸ್ ಎಸ್ಸಿ ಸಿಜಿಎಲ್ ಪರೀಕ್ಷೆಯನ್ನು ಡಿಸೆಂಬರ್ 23 ಹಾಗೂ 24 ರಂದು ನಡೆಸಲಾಗಿತ್ತು. ಈ ಹಿಂದೆ, ಬಿಹಾರ ಲೋಕಸೇವಾ ಆಯೋಗದ ಪೂರ್ವಭಾವಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು, ನಂತರ ಪರೀಕ್ಷೆಯನ್ನು ರದ್ದುಗೊಳಿಸಲಾಯಿತು.

Join Whatsapp