Home ಟಾಪ್ ಸುದ್ದಿಗಳು ಆರ್.ಅಶೋಕ್‌ ಗೆ ಕೋವಿಡ್ ಪಾಸಿಟಿವ್‌: ಆಸ್ಪತ್ರೆಗೆ ದಾಖಲು !

ಆರ್.ಅಶೋಕ್‌ ಗೆ ಕೋವಿಡ್ ಪಾಸಿಟಿವ್‌: ಆಸ್ಪತ್ರೆಗೆ ದಾಖಲು !

ಬೆಂಗಳೂರು: ಕೊರೋನಾ ಮೂರನೇ ಅಲೆ ಇದೀಗ ವಿಧಾನಸೌಧಕ್ಕೆ ಕಾಲಿಟ್ಟಿದ್ದು, ಕಂದಾಯ ಸಚಿವ ಆರ್.ಅಶೋಕ್‌ ಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಲಘು ರೋಗಲಕ್ಷಣಗಳ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಸಚಿವರು ವೈದ್ಯಕೀಯ ಪರೀಕ್ಷೆಗೊಳಪಟ್ಟಿದ್ದಾರೆ.

ಇತ್ತೀಚೆಗಷ್ಟೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಿದ್ದ ಕೋವಿಡ್ ಸಭೆಯಲ್ಲಿ ಭಾಗವಹಿಸಿದ್ದ ಆರ್.ಅಶೋಕ್‌ ಗೆ ಇದೀಗ ಕೊರೊನಾ ಸೋಂಕು ತಗುಲಿದೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹೋಂ ಐಸೋಲೇಷನ್ ಕುರಿತು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version