Home ಟಾಪ್ ಸುದ್ದಿಗಳು ಆರ್.ಅಶೋಕ – ಎಚ್. ಡಿ ಕುಮಾರಸ್ವಾಮಿ ಭೇಟಿ: ರಾಜಕೀಯ ವಿದ್ಯಮಾನಗಳ ಚರ್ಚೆ

ಆರ್.ಅಶೋಕ – ಎಚ್. ಡಿ ಕುಮಾರಸ್ವಾಮಿ ಭೇಟಿ: ರಾಜಕೀಯ ವಿದ್ಯಮಾನಗಳ ಚರ್ಚೆ

ಬೆಂಗಳೂರು: ಬಿಜೆಪಿ ಹಿರಿಯ ಸಚಿವ ಆರ್.ಅಶೋಕ ಶನಿವಾರ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.


ಈ ಬಗ್ಗೆ ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಹಿರಿಯ ಸಚಿವ ಆರ್.ಅಶೋಕ್ ಅವರು ಇಂದು ನನ್ನ ತೋಟದ ಮನೆಯಲ್ಲಿ ಭೇಟಿಯಾಗಿ ರಾಜ್ಯದ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಬಗ್ಗೆ ನನ್ನೊಂದಿಗೆ ಸುದೀರ್ಘವಾಗಿ ಚರ್ಚಿಸಿದರು. ಸೋಮವಾರದಿಂದ ಆರಂಭವಾಗಲಿರುವ ವಿಧಾನಮಂಡಲ ಕಲಾಪದ ಬಗ್ಗೆಯೂ ಅವರು ಸಮಾಲೋಚಿಸಿದರು.


ಸೋಮವಾರ ಸಂಜೆ ಜೆಡಿಎಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದೇನೆ. ಅಲ್ಲಿ, ನಮ್ಮ ಶಾಸಕರ ಜತೆ ಎಲ್ಲ ಬೆಳವಣೆಗಗಳ ಬಗ್ಗೆ ಚರ್ಚಿಸಿದ ನಂತರ ಪಕ್ಷದ ಅಭಿಪ್ರಾಯವನ್ನು ತಿಳಿಸಲಾಗುವುದು ಎಂದು ಅವರಿಗೆ ಹೇಳಿದ್ದೇನೆ. ಪ್ರಸ್ತುತ, ರಾಜ್ಯದ ರೈತಾಪಿ ಜನ ಎದುರಿಸುತ್ತಿರವ ಸಮಸ್ಯೆಗಳೂ ಸೇರಿದಂತೆ ರಾಜ್ಯ ಎದುರಿಸುತ್ತಿರುವ ವಿವಿಧ ಸವಾಲುಗಳ ಬಗ್ಗೆ ಸಚಿವರ ಗಮನಕ್ಕೆ ತಂದಿದ್ದೇನೆ. ಈ ಸಂದರ್ಭದಲ್ಲಿ ನಮ್ಮ ಪಕ್ಷದ ಶಾಸಕರಾದ ಶ್ರೀ ಸಾ.ರಾ.ಮಹೇಶ್ ಅವರು ನನ್ನ ಜತೆ ಇದ್ದರು ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

Join Whatsapp
Exit mobile version