ಕಲಬುರಗಿ: ವಿಪಕ್ಷ ನಾಯಕ ಆರ್.ಅಶೋಕ್ ಅವರು ತಮ್ಮ ಹಣೆಗೆ ಕುಂಕುಮ ಹಾಕಲು ನಿರಾಕರಿಸಿದ ಘಟನೆ ಬೆಳಕಿಗೆ ಬಂದಿದೆ.
ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಸುಲೆಪೇಟ್ ಬಿಜೆಪಿ ಕಚೇರಿಗೆ ಭೇಟಿ ನೀಡಿದಾಗ ಹಿರಿಯ ಮುಖಂಡರೊಬ್ಬರು ಕುಂಕುಮ ಹಚ್ಚಲು ಮುಂದಾದಾಗ ನಿರಾಕರಿಸಿದ್ದಾರೆ.
ಕಚೇರಿಗೆ ಆಗಮಿಸಿದ ಅಶೋಕ್ ಅವರಿಗೆ ಬಿಜೆಪಿ ಮುಖಂಡರು ಹಾರ ಹಾಕಿ ಸ್ವಾಗತಿಸಲು ಮುಂದಾದರು. ಈ ವೇಳೆ ಎರಡು ಹಾರಗಳನ್ನು ತಾವು ಹಾಕಿಕೊಳ್ಳದೆ ಬಿಜೆಪಿ ಹಿರಿಯ ಮುಖಂಡ ಡಾ ವಿಶ್ವನಾಥ್ ಪವಾರ್ ಮತ್ತು ಇನ್ನೊಬ್ಬರಿಗೆ ಹಾಕಿ ಗೌರವಿಸಿದರು. ಈ ನಡುವೆ ಡಾ ವಿಶ್ವನಾಥ್ ಪವಾರ್ ಅವರು ಅಶೋಕ ಅವರ ಹಣೆಗೆ ಕುಂಕುಮ ಇಡಲು ಮುಂದಾಗಿದ್ದಾರೆ. ಆದರೆ ಅಶೋಕ ಅವರು ಕುಂಕುಮ ಹಚ್ಚದಂತೆ ತಡೆದಿದ್ದಾರೆ.