ಕಲಬುರಗಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ನಡೆಸಿದ ಎಫ್ ಡಿಎ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣದ ಕಿಂಗ್ ಪಿನ್ ಆರ್ ಡಿ ಪಾಟೀಲ್ ನನ್ನು 8 ದಿನ ಸಿಐಡಿ ಕಸ್ಟಡಿಗೆ ನೀಡಿ ಕಲಬುರಗಿ ಎರಡನೇ ಜೆಎಂಎಫ್ ಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ತಮ್ಮ ವಶಕ್ಕೆ ನೀಡುವಂತೆ ಸಿಐಡಿ, ಕಲಬುರಗಿ ಎರಡನೇ ಜೆಎಂಎಫ್ಸಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್, ಆರೋಪಿ ಆರ್ಡಿ ಪಾಟೀಲ್ನನ್ನು ಎಂಟು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.