ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಆರ್.ಲತಾ ಅಧಿಕಾರ ಸ್ವೀಕಾರ

Prasthutha|

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆಗಿದ್ದ ಆರ್.ಲತಾ ಅವರು ವರ್ಗಾವಣೆಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

- Advertisement -

  ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

  ಜಿಲ್ಲಾಧಿಕಾರಿ ಲತಾ.ಆರ್ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಗಿಯೂ ಕಾರ್ಯ ನಿರ್ವಹಿಸಿದ್ದರು.



Join Whatsapp