Home ಟಾಪ್ ಸುದ್ದಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಆರ್.ಲತಾ ಅಧಿಕಾರ ಸ್ವೀಕಾರ

ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಯಾಗಿ ಆರ್.ಲತಾ ಅಧಿಕಾರ ಸ್ವೀಕಾರ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆಗಿದ್ದ ಆರ್.ಲತಾ ಅವರು ವರ್ಗಾವಣೆಗೊಂಡಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದರು.

  ಅಪರ ಜಿಲ್ಲಾಧಿಕಾರಿ ವಿಜಯ.ಈ.ರವಿಕುಮಾರ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ದೊಡ್ಡಬಳ್ಳಾಪುರ ಉಪ ವಿಭಾಗಾಧಿಕಾರಿ ತೇಜಸ್ಕುಮಾರ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಕಂದಾಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

  ಜಿಲ್ಲಾಧಿಕಾರಿ ಲತಾ.ಆರ್ ಅವರು ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಗಿಯೂ ಕಾರ್ಯ ನಿರ್ವಹಿಸಿದ್ದರು.

Join Whatsapp
Exit mobile version