ಆರ್. ಅಶೋಕ್‌‌ರನ್ನು ಕೆಳಗಿಳಿಸಿ: ವಿಜಯೇಂದ್ರಗೆ ಮನವಿ ಮಾಡಿದ ಬಜರಂಗದಳ

Prasthutha|

ಬೆಂಗಳೂರು: ವಿಪಕ್ಷ ನಾಯಕ ಸ್ಥಾನದಿಂದ ಆರ್.ಅಶೋಕ್ ಅವರನ್ನು ಕೆಳಗಿಳಿಸಬೇಕು ಎಂದು ಬಜರಂಗದಳ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ಮನವಿ ಮಾಡಿದೆ.

- Advertisement -

ಅಶೋಕ್ ಅವರು ವಿಧಾನ ಸಭೆ ಅಧಿವೇಶನದಲ್ಲಿ ಬಜರಂಗದಳದ ಕಾರ್ಯಕರ್ತರ ಮೇಲೆ ಗೂಂಡಾ ಕಾಯ್ದೆ ಹಾಕಿದ್ದೆ ಎಂದಿದ್ದಾರೆ. ಈ ಮೂಲಕ ಸಂಘಟನೆಯ ಕಾರ್ಯಕರ್ತರಿಗೆ ನೋವುಂಟು ಮಾಡಿದ್ದಾರೆ. ಅವರನ್ನು ತಕ್ಷಣ ವಿಪಕ್ಷ ನಾಯಕ ಸ್ಥಾನದಿಂದ ಇಳಿಸಬೇಕು. ಅವರು ಕೂಡಲೇ ರಾಜ್ಯದ ಹಿಂದೂ ಕಾರ್ಯಕರ್ತರ ಕ್ಷಮೆ ಕೇಳಬೇಕು ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪವೆಲ್ ವಿಜಯೇಂದ್ರ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.

Join Whatsapp