ಬೆಂಗಳೂರು: ರೇಡಿಯೋ ಮಿರ್ಚಿ ಮೂಲಕ ತಮ್ಮ ವೃತ್ತಿ ಬದುಕನ್ನು ಆರಂಭಿಸಿದ್ದ, ತಮ್ಮ ಮಾತಿನ ಮೂಲಕವೇ ಜನರ ಮನಸ್ಸು ಗೆದ್ದಿದ್ದ ಖ್ಯಾತ ಆರ್.ಜೆ ರಚನಾ (RJ Rachana) ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ.
ರೇಡಿಯೋ ಮಿರ್ಚಿ, ರೇಡಿಯೋ ಸಿಟಿ ಸೇರಿದಂತೆ ಹಲವು ರೇಡಿಯೋ ವಾಹಿನಿಗಳಲ್ಲಿ ಕೆಲಸ ಮಾಡಿದ್ದ ಅವರು, ತಮ್ಮದೇ ವಿಶೇಷ ಶೈಲಿಯ ಮಾತಿನಿಂದ ಅಪಾರ ಕೇಳುಗರನ್ನು ಪಡೆದಿದ್ದರು. ಹಾಗಾಗಿ ರಚನಾ ಕಾರ್ಯಕ್ರಮಗಳನ್ನು ಕೇಳಲು ಕೇಳುಗರ ವರ್ಗವೇ ಸೃಷ್ಟಿಯಾಗಿತ್ತು. ಅದರಲ್ಲೂ ಸ್ಯಾಂಡಲ್ ವುಡ್ ನ ಅನೇಕ ಸ್ಟಾರ್ ನಟರು ರಚನಾ ಕಾರ್ಯಕ್ರಮದಲ್ಲಿ ಭಾಗಿಯಾಗಲು ತುದಿಗಾಲಲ್ಲಿ ನಿಲ್ಲುತ್ತಿದ್ದರು. ಅಲ್ಲದೇ ಸಿಂಪಲ್ಲಾಗ್ ಒಂದ್ ಲವ್ ಸ್ಟೋರಿ ಸಿನಿಮಾದಲ್ಲಿ ನಟಿಸಿದ್ದರು, ಹಾಗೂ ಹಲವು ಸೀರಿಯಲ್, ಸಿನಿಮಾಗಳಲ್ಲೂ ನಟಿಸಿದ್ದರು
ರೇಡಿಯೋ ಜಾಕಿಯಾಗಿ ಕೆಲಸ ಮಾಡುತ್ತಿದ್ದ ಆರ್ ಜೆ ರಚನಾ (39) ಕಳೆದ 7 ವರ್ಷಗಳಿಂದ ಕೆಲಸ ಬಿಟ್ಟು ಮನೆಯಲ್ಲಿಯೇ ಏಕಾಂಗಿಯಾಗಿದ್ದರು. ಇದರಿಂದಾಗಿ ಅವರು ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗುತ್ತಿದೆ. ಅತೀ ಚಿಕ್ಕ ವಯಸ್ಸಿನಲ್ಲೇ ಅವರು ಕಾರ್ಡಿಯಾಕ್ ಅರೆಸ್ಟ್ನಿಂದಾಗಿ ನಿಧನರಾಗಿದ್ದಾರೆ.
ಡಯೆಟ್, ಸದಾ ಹಸನ್ಮುಖಿಯಾಗಿಯೇ ಇರುತ್ತಿದ್ದ ಮತ್ತು ಆರೋಗ್ಯದ ಬಗ್ಗೆ ಸಾಕಷ್ಟು ಕಾಳಜಿ ತಗೆದುಕೊಳ್ಳುತ್ತಿದ್ದ ರಚನಾ ಸಾವು ಅವರ ಸ್ನೇಹಿತರ ಬಳಗಕ್ಕೆ ತೀವ್ರ ಆಘಾತ ಮೂಡಿಸಿದೆ.