ಮಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಸಂತ ಆಗ್ನೇಸ್ ಕಾಲೇಜಿನ ವಿದ್ಯಾರ್ಥಿನಿ ಹವ್ವಾ ರಫಾಹ್ ಅವರು 564 (94%) ಅಂಕಗಳನ್ನು ಪಡೆದುಕೊಂಡು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ.
ಮಂಗಳೂರಿನ ಖ್ಯಾತ ಉದ್ಯಮಿ ಕಬೀರ್ ಮತ್ತು ರಝಿಯಾ ದಂಪತಿಯ ಸುಪುತ್ರಿಯಾದ ಹವ್ವಾ ರಫಾಹ್ ಅವರು ನಗರದ ಪ್ರತಿಷ್ಠಿತ ಸಂತ ಆಗ್ನೇಸ್ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.