ರಘುಪತಿ ಭಟ್‌ ಬಿಜೆಪಿಯಿಂದ ಹಾಗೂ ಪ್ರತಾಪರೆಡ್ಡಿ ಕಾಂಗ್ರೆಸ್‌ನಿಂದ ಉಚ್ಚಾಟನೆ

Prasthutha|

ಬೆಂಗಳೂರು: ಮಾಜಿ ಶಾಸಕ ರಘುಪತಿ ಭಟ್‌ ಬಿಜೆಪಿ ಪಕ್ಷದಿಂದ ಉಚ್ಚಾಟಿಸಲಾಗಿದೆ. ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಭಟ್ ವಿರುದ್ಧ ಬಿಜೆಪಿ ಈ ಕ್ರಮ ಕೈಗೊಂಡಿದೆ.ಪಕ್ಷದ ಶಿಸ್ತು ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಾಜಿ ಶಾಸಕ ಕೆ. ರಘುಪತಿ ಭಟ್ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿ ರಾಜ್ಯ ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜು ಪಾಟೀಲ್‌ ಆದೇಶಿಸಿದ್ದಾರೆ.

- Advertisement -

ಪಕ್ಷದ ಸೂಚನೆಯನ್ನು ಕಡೆಗಣಿಸಿ ಪ್ರಸಕ್ತ ವಿಧಾನಪರಿಷತ್ ಚುನಾವಣೆಗೆ ನೈರುತ್ಯ ಪದವೀಧರರ ಕ್ಷೇತ್ರದಿಂದ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ, ಪಕ್ಷದ ಮುಜುಗರಕ್ಕೆ ಕಾರಣರಾಗಿದ್ದೀರಿ. ಇದು ಪಕ್ಷದ ಶಿಸ್ತು ಉಲ್ಲಂಘನೆಯಾಗಿದೆ.
ಆದ್ದರಿಂದ ತಮ್ಮನ್ನು ತಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಜವಾಬ್ದಾರಿಗಳಿಂದ ಮುಕ್ತಗೊಳಿಸಿ ಆರು (6) ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಲಿಂಗರಾಜ್ ಪಾಟೀಲ್ ಆದೇಶದಲ್ಲಿ ತಿಳಿಸಿದ್ದಾರೆ.

ಎನ್. ಪ್ರತಾಪ್ ರೆಡ್ಡಿ

- Advertisement -

ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧವೇ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪಕ್ಷೇತರ ಅಭ್ಯರ್ಥಿ ನಾರಾ ಪ್ರತಾಪರೆಡ್ಡಿಯವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಛಾಟಿಸಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್ ಅವರು ಆದೇಶ ಹೊರಡಿಸಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸೇರಿದ್ದ ಎನ್.ಪ್ರತಾಪರೆಡ್ಡಿಯವರು, ಬಳ್ಳಾರಿ ನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಿಧಾನ ಪರಿಷತ್‌ನ ಈಶಾನ್ಯ ಪದವೀಧರ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಬಯಸಿದ್ದರು. ಆದರೆ, ಟಿಕೇಟ್ ನೀಡಿಲ್ಲ.



Join Whatsapp