ದೇಶವನ್ನು ಸೆಕೆಂಡುಗಳಲ್ಲಿ ಅಳಿಸಿ ನಾಶಮಾಡಿದ್ದಾರೆ: ಕೇಂದ್ರದ ವಿರುದ್ಧ ರಾಹುಲ್ ವಾಗ್ದಾಳಿ

Prasthutha: July 15, 2021

ದೆಹಲಿ: ಶತಮಾನಗಳಷ್ಟು ಸಮಯ ತೆಗೆದುಕೊಂಡು ನಿರ್ಮಿಸಿದ ದೇಶವನ್ನು ಸೆಕೆಂಡುಗಳಲ್ಲಿ ಅಳಿಸಿ ನಾಶಮಾಡಿದ್ದಾರೆ. ನಮ್ಮ ದೇಶಕ್ಕೆ ಇಂಥ ಕಷ್ಟದ ಸಮಯ ತಂದವರು ಯಾರು ಎಂಬುದು ಎಲ್ಲರಿಗೂ ಗೊತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅವರು ಟ್ವೀಟ್ ಮೂಲಕ ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ, ಹಲವು ವಿಚಾರಗಳನ್ನಿಟ್ಟುಕೊಂಡು ಕಿಡಿಕಾರಿದ್ದಾರೆ. ಸತತವಾಗಿ ಏರಿಕೆಯಾಗುತ್ತಿರುವ ಪೆಟ್ರೋಲ್ ದರ, ಕೊರೊನಾ ಲಸಿಕೆ ಕೊರತೆ, ಚೀನಾ-ಭಾರತ ಗಡಿಯ ವಾಸ್ತವ ನಿಯಂತ್ರಣ ರೇಖೆಯಲ್ಲಿನ ಬಿಕ್ಕಟ್ಟು, ರೈತರ ಹೋರಾಟಗಳಿಗೆಲ್ಲ ಕೇಂದ್ರ ಸರ್ಕಾರವೇ ಕಾರಣ ಎಂದು ಹೇಳಿದ್ದಾರೆ.

ವಿದೇಶ ಹಾಗೂ ರಕ್ಷಣಾ ನೀತಿಯನ್ನು ಭಾರತ ಸರ್ಕಾರವು ದೇಶೀಯ ರಾಜಕೀಯ ಅಸ್ತ್ರವನ್ನಾಗಿ ಬಳಕೆ ಮಾಡುತ್ತಿದ್ದು, ನಮ್ಮ ದೇಶವನ್ನು ದುರ್ಬಲಗೊಳಿಸಿದೆ. ಭಾರತ ಎಂದಿಗೂ ಇಷ್ಟೊಂದು ಅಭದ್ರ ಸ್ಥಿತಿ ಎದುರಿಸಿರಲಿಲ್ಲ ಎಂದು ಆರೋಪ ಮಾಡಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ