ಬೆಂಗಳೂರು: ಬಿಜೆಪಿಯ ಶೇಕಡಾ 40ರ ಕಮಿಷನ್ ಸರ್ಕಾರ ಅವರ ಪಕ್ಷದ ಕಾರ್ಯಕರ್ತನ ಜೀವವನ್ನೇ ಬಲಿ ಪಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.
ಸಂತ್ರಸ್ತ ಮಾಡಿಕೊಂಡ ಮನವಿಗಳಿಗೂ ಪ್ರಧಾನಿ ಉತ್ತರಿಸಲಿಲ್ಲ. ಪಿಎಂ ಮತ್ತು ಸಿಎಂ ಕೂಡ ಇದರಲ್ಲಿ ಶಾಮೀಲಾಗಿದ್ದಾರೆ ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಉಡುಪಿಯ ಲಾಡ್ಜ್ ಒಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದಕ್ಕೂ ಮೊದಲು ಅವರು ನನ್ನ ಆತ್ಮಹತ್ಯೆಗೆ ಸಚಿವ ಕೆ.ಎಸ್. ಈಶ್ವರಪ್ಪ ಕಾರಣ ಎಂದು ಡೆಟ್ ನೋಟ್ ಬರೆದಿದ್ದರು.
ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ರಾಜ್ಯಾದ್ಯಂತ ವಿವಿಧ ರಾಜಕೀಯ ಪಕ್ಷಗಳು, ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಈ ಮಧ್ಯೆ ರಾಹುಲ್ ಗಾಂಧಿ ಕೂಡ ಸಂತೋಷ್ ಆತ್ಮಹತ್ಯೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.