ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಜರಾಗಿದ್ದಾರೆ.
ಇನ್ನು ಕೆಲವೇ ಕ್ಷಣಗಳಲ್ಲಿ ವಿಚಾರಣೆ ಆರಂಭವಾಗಲಿದೆ ಎಂದು ತಿಳಿದು ಬಂದಿದೆ. ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿಗೆ ಇಡಿ ಸಮನ್ಸ್ ನೀಡಿರುವುದನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷ ಇಂದು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಪಕ್ಷದ ಒಗ್ಗಟ್ಟು ಪ್ರದರ್ಶಿಸಲು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಮತ್ತು ಸಂಸದರು ಇಡಿ ಕಚೇರಿಯ ಹೊರಗೆ ‘ಸತ್ಯಾಗ್ರಹ’ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆ ನಡೆಸುತ್ತಿದ್ದ ಹಲವು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರನ್ನು ವಶಕ್ಕೆ ಪಡೆಯಲಾಗಿದ್ದು, ಎಐಸಿಸಿ ಕಚೇರಿ ಸುತ್ತ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ.