Home ಟಾಪ್ ಸುದ್ದಿಗಳು ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಕ್ಷಣಗಣನೆ : ಮೈಸೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ

ಗೃಹಲಕ್ಷ್ಮಿ ಯೋಜನೆ ಚಾಲನೆಗೆ ಕ್ಷಣಗಣನೆ : ಮೈಸೂರಿಗೆ ಆಗಮಿಸಲಿರುವ ರಾಹುಲ್ ಗಾಂಧಿ

ಗೃಹಲಕ್ಷ್ಮೀ ಯೋಜನೆ ಚಾಲನೆಗೆ ಸಿದ್ದಗೊಂಡಿರುವ ವೇದಿಕೆ

ಮೈಸೂರು: ಇಂದು ಬೆಳಗ್ಗೆ 11.30ಕ್ಕೆ ಕಾಂಗ್ರೆಸ್​​ ಸರ್ಕಾರದ ಮಹತ್ವಾಕಾಂಕ್ಷೆಯ 4ನೇ ಗ್ಯಾರಂಟಿ ಗೃಹಲಕ್ಷ್ಮೀ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಚಾಲನೆ ಸಿಗಲಿದೆ. ರಾಜ್ಯಾದ್ಯಂತ ಏಕಕಾಲದಲ್ಲಿ ಕಾಂಗ್ರೆಸ್​ನ 4ನೇ ಗ್ಯಾರಂಟಿ ಉದ್ಘಾಟನೆಯಾಗಲಿದೆ.

ಗೃಹಲಕ್ಷ್ಮಿ ಯೋಜನೆ ಜಾರಿ ಹಿನ್ನೆಲೆ ಇಂದು ಮೈಸೂರಿಗೆ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ದೆಹಲಿಯಿಂದ ಬೆಂಗಳೂರಿಗೆ ವಿಶೇಷ ವಿಮಾನದ ಮೂಲಕ ಆಗಮಿಸಲಿದ್ದು, ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನಿಂದ ಮೈಸೂರಿಗೆ ಬರಲಿದ್ದಾರೆ.

ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಯೋಜನೆಗೆ ಚಾಲನೆ ನೀಡಲಿದ್ದಾರೆ. ಇಂದು ಮನೆಯ ಯಜಮಾನಿಯ ಬ್ಯಾಂಕ್​​​ ಖಾತೆಗೆ 2000 ರೂ. ಜಮೆಯಾಗಲಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ.

Join Whatsapp
Exit mobile version