Home ಟಾಪ್ ಸುದ್ದಿಗಳು ಸಂಸತ್ತಿಗೆ ಆಗಮಿಸಿದ ರಾಹುಲ್ ಗಾಂಧಿ: INDIA ಒಕ್ಕೂಟದ ಸಂಸದರಿಂದ ಅದ್ಧೂರಿ ಸ್ವಾಗತ

ಸಂಸತ್ತಿಗೆ ಆಗಮಿಸಿದ ರಾಹುಲ್ ಗಾಂಧಿ: INDIA ಒಕ್ಕೂಟದ ಸಂಸದರಿಂದ ಅದ್ಧೂರಿ ಸ್ವಾಗತ

ನವದೆಹಲಿ: ರಾಹುಲ್ ಗಾಂಧಿಯವರ ಲೋಕಸಭಾ ಸದಸ್ಯತ್ವ ಸ್ಥಾನವನ್ನು ಪುನಃಸ್ಥಾಪಿಸಲಾಗಿದ್ದು, ಸಂಸತ್ತಿಗೆ ಆಗಮಿಸಿದ ಅವರಿಗೆ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಆತ್ಮೀಯ ಸ್ವಾಗತ ಕೋರಿದರು.


ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆ ಬಳಿಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು.


ಸಂಸತ್ತಿನ ಗೇಟ್ ನಂಬರ್ ಒಂದರಲ್ಲಿ ಅವರನ್ನು ಸ್ವಾಗತಿಸಿದ ಕಾಂಗ್ರೆಸ್ ಸಂಸದರು ಮತ್ತು INDIA ಒಕ್ಕೂಟದ ವಿರೋಧ ಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗಿದರು.

Join Whatsapp
Exit mobile version