“ದ್ವೇಷದ ಬುಲ್ಡೋಜರ್ ಗಳನ್ನು ಆಫ್ ಮಾಡಿ, ವಿದ್ಯುತ್ ಸ್ಥಾವರಗಳನ್ನು ಆನ್ ಮಾಡಿ”: ಕೇಂದ್ರ ಸರ್ಕಾರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Prasthutha|

ಹೊಸದಿಲ್ಲಿ: “ದ್ವೇಷದ ಬುಲ್ಡೋಜರ್ ಗಳನ್ನು ಆಫ್ ಮಾಡಿ, ವಿದ್ಯುತ್ ಸ್ಥಾವರಗಳನ್ನು ಆನ್ ಮಾಡಿ ಎಂದು ದಿಲ್ಲಿ ಮತ್ತು ಮಧ್ಯಪ್ರದೇಶದ ಹಿಂಸಾಚಾರ ಪೀಡಿತ ಪ್ರದೇಶಗಳಲ್ಲಿ ಬುಲ್ಡೋಜರ್ ಗಳ ಬಳಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ದೇಶದಲ್ಲಿ ಕಲ್ಲಿದ್ದಲು ಕೊರತೆಯಾಗಿದ್ದು, ವಿದ್ಯುತ್ ಸ್ಥಾವರಗಳಲ್ಲಿ ಕಲ್ಲಿದ್ದಲು ದಾಸ್ತಾನು ಕಡಿಮೆಯಾದ ಕಾರಣ ಭಾರತವು ವಿದ್ಯುತ್ ಕೊರತೆ ಎದುರಿಸುವ ಸಾಧ್ಯತೆ ಇದೆ ಎಂದು ಹೇಳಿದರು.


“ಮೋದಿ ಜೀ, ದಿಗ್ಭ್ರಮೆಯುಂಟಾಗುತ್ತಿದೆ. ವಿದ್ಯುತ್ ಕಡಿತವು ಸಣ್ಣ ಕೈಗಾರಿಕೆಗಳನ್ನು ನಾಶಮಾಡುತ್ತದೆ. ಇದು ಹೆಚ್ಚಿನ ಉದ್ಯೋಗ ನಷ್ಟಕ್ಕೆ ಕಾರಣವಾಗುತ್ತದೆ ಎಂದು ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.



Join Whatsapp