ಹಣದುಬ್ಬರ ಏರಿಕೆ; ಜನರ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕು: ರಾಹುಲ್ ಗಾಂಧಿ ವಾಗ್ದಾಳಿ

Prasthutha|

ನವದೆಹಲಿ: ಹಣದುಬ್ಬರ ಮತ್ತಷ್ಟು ಏರಿಕೆಯಾಗಿದ್ದು, ದೇಶದ ಜನರನ್ನು ರಕ್ಷಿಸಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಎಚ್ಚರಿಸಿದ್ದಾರೆ.

- Advertisement -

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಹಣದುಬ್ಬರ ಭಾರತೀಯರ ಮೇಲಿನ ತೆರಿಗೆಯಾಗಿದ್ದು, ರಷ್ಯಾ-ಉಕ್ರೇನ್ ಯುದ್ಧ ಪ್ರಾರಂಭವಾಗುವ ಮೊದಲೇ ದಾಖಲೆ ಪ್ರಮಾಣದ ಬೆಲೆ ಏರಿಕೆಯಿಂದ ಬಡ ಹಾಗೂ ಮಧ್ಯಮ ವರ್ಗದವರು ತತ್ತರಿಸಿದ್ದಾರೆ ಎಂದು ಹೇಳಿದ್ದಾರೆ.

‘ಹಣದುಬ್ಬರವು ಮತ್ತಷ್ಟು ಏರಿಕೆಯಾಗಲಿದೆ. ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ ಗೆ 100 ಅಮೆರಿಕನ್ ಡಾಲರ್, ಆಹಾರ ಬೆಲೆ ಶೇ 22ರಷ್ಟು ಏರಿಕೆಯಾಗುವ ಸಾಧ್ಯತೆಯಿದೆ. ಕೋವಿಡ್ ಜಾಗತಿಕ ಪೂರೈಕೆ ಸರಪಳಿಯನ್ನು ಅಡ್ಡಿಪಡಿಸುತ್ತದೆ. ಹಾಗಾಗಿ ಕೇಂದ್ರ ಸರ್ಕಾರವು ಈಗಲೇ ಕಾರ್ಯಪ್ರವೃತರಾಗಿ ಜನರನ್ನು ರಕ್ಷಿಸಬೇಕಿದೆ’ ಎಂದು ಬರೆದುಕೊಂಡಿದ್ದಾರೆ.



Join Whatsapp