ಆಸ್ಕರ್ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿ ಅಂತಿಮ ದರ್ಶನ ಪಡೆದ ರಾಹುಲ್ ಗಾಂಧಿ

Prasthutha|

ಬೆಂಗಳೂರು: ಕಾಂಗ್ರೆಸ್ ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ಅಂತ್ಯಸಂಸ್ಕಾರದಲ್ಲಿ ರಾಹುಲ್ ಗಾಂಧಿ ಭಾಗವಹಿಸಿ ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿ ಬಳಿಕ ಅಂತಿಮ ದರ್ಶನ ಪಡೆದರು.

ಮಧ್ಯಾಹ್ನ 1.45 ಕ್ಕೆ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತಲುಪಲಿದ ರಾಹುಲ್, ಬಳಿಕ 3.30 ಫರ್ನಾಂಡಿಸ್ ಅಂತಿಮ ಆಶೀರ್ವಚನದಲ್ಲಿ  ಭಾಗವಹಿಸಿದರು.  ಬೆಂಗಳೂರಿನ ಸೈಂಟ್ ಪ್ಯಾಟ್ರಿಕ್  ಚರ್ಚ್ ನಲ್ಲಿ ಆಸ್ಕರ್ ಫರ್ನಾಂಡಿಸ್ ಅಂತ್ಯ ಸಂಸ್ಕಾರ ನೆರವೇರಿಸಲು ಸಕಲ ಸಿದ್ಧತೆ ಮಾಡಲಾಗಿದೆ.

- Advertisement -

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನ ಹಲವು ಮುಖಂಡರು ಭಾಗವಹಿಸಿದ್ದರು.

- Advertisement -