ನವದೆಹಲಿ: ಇತ್ತೀಚೆಗೆ ಸಮಾಜವಾದಿ ಪಕ್ಷದ ನಾಯಕ ಫಹಾದ್ ಅಹ್ಮದ್ ಜೊತೆ ದಾಂಪತ್ಯಕ್ಕೆ ಕಾಲಿಟ್ಟ ಬಾಲಿವುಡ್ ನಟಿ ಸ್ವರಾ ಭಾಸ್ಕರ್ ಅವರ ಮದುವೆ ರಿಸೆಪ್ಶನ್’ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸಿದ್ದಾರೆ.
ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಫೆಬ್ರವರಿಯಲ್ಲಿ ನಟಿ ಸ್ವರಾ ಭಾಸ್ಕರ್ ಅವರು ಫಹದ್’ರೊಂದಿಗೆ ರಿಜಿಸ್ಟರ್ ಮದುವೆಯಾಗಿರುವುದಾಗಿ ತಿಳಿಸಿದ್ದರು. ರಿಸೆಪ್ಶನ್’ನಲ್ಲಿ ಸಿನಿಮಾ ಸೆಲೆಬ್ರಿಟಿಗಳು ಮತ್ತು ರಾಜಕೀಯ ಪಕ್ಷದ ನಾಯಕರು ಪಾಲ್ಗೊಂಡಿದ್ದಾರೆ. ಸ್ವರಾ- ಫಹದ್ ರಿಸೆಪ್ಶನ್ ಸಂಭ್ರಮದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ಭಾಗವಹಿಸಿ ನವ ದಂಪತಿಗೆ ಶುಭ ಹಾರೈಸಿದ್ದಾರೆ. ಮಧ್ಯಪ್ರದೇಶ ಉಜ್ಜಯಿನಿಯಲ್ಲಿ ನಡೆದ ಭಾರತ ಜೋಡೋ ಯಾತ್ರೆಯ ಸಂದರ್ಭದಲ್ಲಿ ರಾಹುಲ್ ಗಾಂಧಿ ಜೊತೆ ಸ್ವರಾ ಭಾಸ್ಕರ್ ಹೆಜ್ಜೆ ಹಾಕಿದ್ದನ್ನು ಇಲ್ಲಿ ಸ್ಮರಿಸಬಹುದು.
Sri Rahul Gandhi ji Attends Actress Swara Bhaskar's Wedding Ceremony today .#RahulGandhi pic.twitter.com/PwsD2nzJWy
— S Rajasekar (@srspdkt) March 17, 2023