ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಲಕ್ನೋ ವಿಮಾನ ಹತ್ತದಂತೆ ದೆಹಲಿ ನಿಲ್ದಾಣದಲ್ಲಿ ತಡೆದು ನಿಲ್ಲಿಸಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇತ್ತೀಚೆಗೆ ಉತ್ತರಪ್ರದೇಶದ ಲಖಿಂಪುರ ಹಿಂಸಾಚಾರದಲ್ಲಿ ಸಾವನ್ನಪ್ಪಿದ್ದ ರೈತರ ಕುಟುಂಬಗಳನ್ನು ಭೇಟಿ ಮಾಡುವ ಸಲುವಾಗಿ ಇಲ್ಲಿಗೆ ಆಗಮಿಸ ಬೇಕಾಗಿದ್ದ ರಾಹುಲ್ ಅವರನ್ನು ಇಂದು ದೆಹಲಿ ವಿಮಾನ ನಿಲ್ದಾಣದಲ್ಲಿ ತಡೆದು ನಿಲ್ಲಿಸಲಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಮಾತ್ರವಲ್ಲ ಕೇಂದ್ರ ಮತ್ತು ಉ.ಪ್ರ ಸರ್ಕಾರದ ಸಂವಿಧಾನ ವಿರೋಧಿ ನಡೆಯನ್ನು ಕಾಂಗ್ರೆಸ್ ನಾಯಕರು ಖಂಡಿಸಿದ್ದಾರೆ. ಲಖಿಂಪುರದ ತಲುಪುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ರಾಹುಲ್ ಗಾಂಧಿ ಗುಡುಗಿದ್ದಾರೆ.
ರಾಹುಲ್ ಗಾಂಧಿ ಇಂದು ಪತ್ರಿಕಾಗೋಷ್ಠಿ ಕರೆದು ಇಬ್ಬರು ಕಾಂಗ್ರೆಸ್ ಮುಖ್ಯಮಂತ್ರಿ ಗಳೊಂದಿಗೆ ಲಖಿಂಪುರ ಖೇರಿಗೆ ತೆರಳಿ ಸಂತ್ರಸ್ತ ಕುಟುಂಬವನ್ನು ಭೇಟಿಯಾಗುವುದಾಗಿ ತಿಳಿಸಿದ್ದರು. ಪ್ರಸಕ್ತ ಅವರನ್ನು ದೆಹಲಿ ಏರ್ಪೋರ್ಟ್ ನಲ್ಲಿ ತಡೆದು ನಿಲ್ಲಿಸಲಾಗಿದೆ.