Home ಜಾಲತಾಣದಿಂದ ‘ಡಿಸ್‌ಕ್ವಾಲಿಫೈಡ್ ಎಂಪಿ’| ಟ್ವಿಟ್ಟರ್ ಖಾತೆಯ ಬಯೋ ಬದಲಾಯಿಸಿದ ರಾಹುಲ್ ಗಾಂಧಿ

‘ಡಿಸ್‌ಕ್ವಾಲಿಫೈಡ್ ಎಂಪಿ’| ಟ್ವಿಟ್ಟರ್ ಖಾತೆಯ ಬಯೋ ಬದಲಾಯಿಸಿದ ರಾಹುಲ್ ಗಾಂಧಿ

ಹೊಸದಿಲ್ಲಿ: ಸಂಸದ ಸ್ಥಾನದಿಂದ ಅನರ್ಹಗೊಂಡ ಬಳಿಕ ರಾಹುಲ್ ಗಾಂಧಿ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯ ಬಯೋ ಬದಲಾಯಿಸಿದ್ದು, Dis’Qualified MP(ಅನರ್ಹಗೊಂಡ ಸಂಸದ) ಎಂದು ಬರೆದುಕೊಂಡಿದ್ದಾರೆ.

ಮೋದಿ ಉಪನಾಮ ಹೇಳಿಕೆಗಾಗಿ ಕ್ರಿಮಿನಲ್ ಮಾನನಷ್ಟದ ಆರೋಪದ ಮೇಲೆ ಕಾಂಗ್ರೆಸ್ ಪಕ್ಷದ ರಾಹುಲ್ ಗಾಂಧಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ಇದರ ಬೆನ್ನಲ್ಲೇ ತಮ್ಮ ಬಯೋದಲ್ಲಿ, ರಾಹುಲ್ ತಮ್ಮನ್ನು ಅನರ್ಹ ಸಂಸದ ಎಂದು ಕರೆದುಕೊಂಡಿದ್ದಾರೆ.

ಕಳೆದ ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕರ್ನಾಟಕದ ಕೋಲಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಓರ್ವ ಕಳ್ಳ ಎಂದು ರಾಹುಲ್ ಗಾಂಧಿ ಹೇಳಿಕೆ ನೀಡಿದ್ದರು. ನಿರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಇವರೆಲ್ಲರ ಸರ್‌ನೇಮ್ ಒಂದೇ ಆಗಿದ್ದು, ಈ ಎಲ್ಲಾ ಕಳ್ಳರು ದೇಶವನ್ನು ಲೂಟಿ ಮಾಡಿದ್ದಾರೆ ಎಂದು ರಾಹುಲ್ ತಮ್ಮ ಭಾಷಣದಲ್ಲಿ ಹೇಳಿದ್ದರು. ಈ ಹೇಳಿಕೆಯನ್ನು ಆಧಾರಿಸಿ ಬಿಜೆಪಿ ಶಾಸಕ ಮತ್ತು ಗುಜರಾತ್ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ಕ್ರಿಮಿನಲ್ ಮಾನಹಾನಿ ದೂರು ದಾಖಲಿಸಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ್ದ ಸೂರತ್ ಕೋರ್ಟ್ ರಾಹುಲ್ ದೋಷಿ ಎಂದು ತೀರ್ಪು ನೀಡಿ 2 ವರ್ಷ ಜೈಲು ಶಿಕ್ಷೆಯನ್ನು ಪ್ರಕಟಿಸಿತ್ತು.

Join Whatsapp
Exit mobile version