ಜೈ ಶ್ರೀರಾಮ್ ಹೇಳುವಂತೆ ಮುಸ್ಲಿಂ ವೃದ್ಧನಿಗೆ ಥಳಿತ | ರಾಹುಲ್ ಗಾಂಧಿ ಖಂಡನೆ

Prasthutha: June 15, 2021

►ಇದು ಸಮಾಜ ಮತ್ತು ಧರ್ಮಕ್ಕೆ ನಾಚಿಕೆಗೇಡಿನ ಸಂಗತಿ ಎಂದ ಕಾಂಗ್ರೆಸ್ ಮುಖಂಡ

ಹೊಸದಿಲ್ಲಿ : ಉತ್ತರಪ್ರದೇಶದ ಗಾಝಿಯಾಬಾದ್‌ನಲ್ಲಿ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಕೇಳಿ ಮುಸ್ಲಿಂ ವೃದ್ಧರೊಬ್ಬರನ್ನು ಥಳಿಸಿದ ಘಟನೆಯನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ತೀವ್ರವಾಗಿ ಖಂಡಿಸಿದ್ದು, ಇಂತಹ ಕ್ರೌರ್ಯ ಸಮಾಜ ಮತ್ತು ಧರ್ಮ ಎರಡಕ್ಕೂ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಭಗವಾನ್ ರಾಮನ ನಿಜವಾದ ಭಕ್ತನು ಅಂತಹ ಕೆಲಸವನ್ನು ಮಾಡುತ್ತಾನೆ ಎಂಬುದನ್ನು ನಾನು ಒಪ್ಪಿಕೊಳ್ಳುವುದಿಲ್ಲ, ಇಂತಹ ಕ್ರೌರ್ಯವನ್ನು ಮಾನವೀಯತೆಯಿಂದ ದೂರವಿಡಬೇಕಾಗಿದೆ. ಈ ಘಟನೆಯು ಸಮಾಜ ಮತ್ತು ಧರ್ಮ ಎರಡಕ್ಕೂ ನಾಚಿಕೆಗೇಡಿನ ಸಂಗತಿ’ ಎಂದಿದ್ದಾರೆ.

ಮುಸ್ಲಿಂ ವೃದ್ಧರೊಬ್ಬರನ್ನು ನಾಲ್ಕು ಮಂದಿ ಥಳಿಸಿ, ಗಡ್ಡ ಕತ್ತರಿಸಿ ‘ಜೈ ಶ್ರೀ ರಾಮ್’ ಎಂದು ಜಪಿಸುವಂತೆ ಒತ್ತಾಯಿಸಿದ್ದು, ಈ ಘಟನೆಯಲ್ಲಿ ಭಾಗಿಯಾಗಿದ್ದ ಆರೋಪಿಗಳ ವಿರುದ್ಧ ಈಗಾಗಲೇ ಎಫ್‌ಐಆರ್ ದಾಖಲಿಸಿ ಪರ್ವೇಶ್ ಗುರ್ಜರ್ ಎಂಬ ವ್ಯಕ್ತಿಯನ್ನು ಬಂಧಿಸಿರುವುದಾಗಿ ಗಾಝಿಯಾಬಾದ್ ಪೊಲೀಸರು ತಿಳಿಸಿದ್ದಾರೆ .

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ