ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಪಕ್ಷದ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಸಮನ್ಸ್ ಜಾರಿಗೊಳಿಸಿದ ಕ್ರಮವನ್ನು ಪ್ರತಿಭಟಿಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರನ್ನು ಸೋಮವಾರ ಬೆಳಿಗ್ಗೆ ಮೆರವಣಿಗೆಗೆ ಮುಂಚಿತವಾಗಿ ಬಂಧಿಸಲಾಯಿತು.
ಕಾಂಗ್ರೆಸ್ ಕಾರ್ಯಕರ್ತರನ್ನು ತಮ್ಮ ನಾಯಕರ ಪರವಾಗಿ ಘೋಷಣೆಗಳನ್ನು ಕೂಗುತ್ತಾ ಜಾಥಾ ಹೊರಟಾಗ ಅವರನ್ನು ಬಂಧಿಸಿ ಬಸ್ ಗಳಲ್ಲಿ ಪೊಲೀಸರು ಕರೆದೊಯ್ದಿದ್ದಾರೆ.
ಪಕ್ಷದ ಕೇಂದ್ರ ಕಚೇರಿಯಿಂದ ಇಡಿ ಕಚೇರಿವರೆಗೆ ಮೆರವಣಿಗೆ ನಡೆಸಲು ಪಕ್ಷ ಯೋಜಿಸಿದೆ ಮತ್ತು ರಾಹುಲ್ ಗಾಂಧಿಗೆ ಬೆಂಬಲವಾಗಿ ರಾಜ್ಯಗಳಲ್ಲಿನ ಇಡಿ ಕಚೇರಿಗಳ ಹೊರಗೆ ‘ಸತ್ಯಾಗ್ರಹ’ ನಡೆಸಲಿದೆ ಎಂದು ತಿಳಿದು ಬಂದಿದೆ.
ಮನಿ ಲಾಂಡರಿಂಗ್ ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದ (ಇಡಿ) ಮುಂದೆ ರಾಹುಲ್ ಗಾಂಧಿ ಇಂದು ಹಾಜರಾಗಲಿದ್ದಾರೆ. ಏಜೆನ್ಸಿಯ ಕಚೇರಿ ಬಳಿ ಪೊಲೀಸರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ರಾಹುಲ್ ಗಾಂಧಿ ಅವರೊಂದಿಗೆ ಇಡಿ ಕಚೇರಿಗೆ ತೆರಳಲಿದ್ದಾರೆ ಎಂದು ತಿಳಿದುಬಂದಿದೆ.