ರಾಹುಲ್ ಗಾಂಧಿ ಅನರ್ಹತೆ ಖಂಡಿಸಿ ಪ್ರತಿಭಟನೆ| ಗುಜರಾತಿನ 16 ಶಾಸಕರು ಅಮಾನತು

Prasthutha|

- Advertisement -

ಅಹಮದಾಬಾದ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿರುವುದನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾರಣಕ್ಕಾಗಿ ಗುಜರಾತ್ ವಿಧಾನಸಭೆಯ ಸ್ಪೀಕರ್ ಸೋಮವಾರ 16 ಕಾಂಗ್ರೆಸ್ ಶಾಸಕರನ್ನು ಮಾರ್ಚ್ 29 ರವರೆಗೆ ಸದನದಿಂದ ಅಮಾನತುಗೊಳಿಸಿದ್ದಾರೆ.

- Advertisement -

ಪ್ರಶ್ನೋತ್ತರ ಅವಧಿ ಆರಂಭವಾದ ತಕ್ಷಣ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಅಮಿತ್ ಚಾವ್ಡಾ, ರಾಹುಲ್ ಗಾಂಧಿ ಅವರನ್ನು ಲೋಕಸಭೆಯಿಂದ ಅನರ್ಹಗೊಳಿಸಿರುವುದರ ಬಗ್ಗೆ ಚರ್ಚೆಗೆ ಒತ್ತಾಯಿಸಿದರು.

ಸ್ಪೀಕರ್ ಶಂಕರ್ ಚೌಧರಿ ಅವರು ಚಾವ್ಡಾ ಅವರ ಬಳಿ ಪ್ರಶ್ನೋತ್ತರ ಅವಧಿಯಲ್ಲಿ ಯಾವುದೇ ಚರ್ಚೆಗೆ ಅವಕಾಶವಿಲ್ಲ ನಂತರ ವಿಷಯವನ್ನು ಪ್ರಸ್ತಾಪಿಸಬಹುದು ಎಂದರು. ಈ ಸಮಯದಲ್ಲಿ ಕಾಂಗ್ರೆಸ್‌ನ ಇತರ ಶಾಸಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯನ್ನು ಮುಂದುವರಿಸಿದ ಶಾಸಕರನ್ನು ಹೊರಹಾಕಲು ಸ್ಪೀಕರ್ ಮಾರ್ಷಲ್‌ಗಳಿಗೆ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯ ನಂತರ ಮಾರ್ಚ್ 29 ರಂದು ನಡೆಯುತ್ತಿರುವ ಬಜೆಟ್ ಅಧಿವೇಶನದ ಅಂತ್ಯದವರೆಗೆ ಅವರೆಲ್ಲರನ್ನು ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಲಾಯಿತು.

ಸೋಮವಾರ, ರಾಹುಲ್ ಗಾಂಧಿಯವರ ಅನರ್ಹತೆಯನ್ನು ಖಂಡಿಸಿ ಕಾಂಗ್ರೆಸ್‌ನ ಎಲ್ಲಾ ಶಾಸಕರು ಕಪ್ಪು ಬಟ್ಟೆ ಧರಿಸಿ ಗುಜರಾತ್ ವಿಧಾನಸಭೆಗೆ ಬಂದಿದ್ದರು. ಈ ವೇಳೆ ಕಾಂಗ್ರೆಸ್‌ನ 17 ಶಾಸಕರ ಪೈಕಿ 16 ಶಾಸಕರು ಸದನದಲ್ಲಿ ಹಾಜರಿದ್ದರು.

Join Whatsapp