ಚುನಾವಣೆ ಗೆಲ್ಲಲು ಕೈ ಕಾರ್ಯತಂತ್ರ: ವಿದ್ಯಾರ್ಥಿನಿಯರಿಗೆ ಸ್ಮಾರ್ಟ್​​​ ಫೋನ್​ ವಿತರಿಸಿದ ರಾಹುಲ್​ ಗಾಂಧಿ

Prasthutha|

ಜೈಪುರ: ರಾಜಸ್ಥಾನದಲ್ಲಿ ಮತ್ತೆ ಅಧಿಕಾರಕ್ಕೆ ಮರಳಲು ಪ್ಲಾನ್​ ಹಾಕಿರುವ ಸಿಎಂ ಅಶೋಕ್​ ಗೆಹ್ಲೋಟ್​ ಅದಕ್ಕಾಗಿ ಭರ್ಜರಿ ಕಾರ್ಯತಂತ್ರವನ್ನು ರೂಪಿಸುತ್ತಿದ್ದಾರೆ.

- Advertisement -

ಇದಕ್ಕಾಗಿ ಅವರು ಹೊಸ ಹೊಸ ಯೋಜನೆಗಳನ್ನು ಘೋಷಣೆ ಮಾಡುತ್ತಿದ್ದಾರೆ. ಜೈಪುರದ ಬಿರ್ಲಾ ಆಡಿಟೋರಿಯಂನಲ್ಲಿ ಇಂದು ಸ್ಮಾರ್ಟ್​ ಫೋನ್​ ಯೋಜನೆಗೆ ಚಾಲನೆ ನೀಡಲಿದ್ದಾರೆ

ಯೋಜನೆಗೆ ಚಾಲನೆ ಸಿಗುವ ಮುನ್ನವೇ ಕಾಂಗ್ರೆಸ್​ ನೇತಾರ, ರಾಹುಲ್​ ಗಾಂಧಿ ನಿನ್ನೆ ಮಂಗರ್‌ ನಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಸ್ಮಾರ್ಟ್‌ ಫೋನ್ ಹಸ್ತಾಂತರಿಸುವ ಮೂಲಕ ಯೋಜನೆಗೆ ಚಾಲನೆ ಕೊಟ್ಟಿದ್ದಾರೆ. ಮೊದಲ ಸುತ್ತಿನಲ್ಲಿ ಚಿರಂಜೀವಿ ಕುಟುಂಬದ ಮಹಿಳಾ ಮುಖ್ಯಸ್ಥರು ಸ್ಮಾರ್ಟ್‌ ಫೋನ್‌ ಗಳನ್ನು ಪಡೆಯಲಿದ್ದಾರೆ. ಸ್ಮಾರ್ಟ್​ ಫೋನ್​ ಯೋಜನೆ ಅಡಿ ರಾಜ್ಯದ 40 ಲಕ್ಷ ಮಹಿಳೆಯರು ಮತ್ತು ವಿದ್ಯಾರ್ಥಿಗಳು ಸ್ಮಾರ್ಟ್ ಫೋನ್ ಪಡೆಯಲಿದ್ದಾರೆ. ಅಷ್ಟೇ ಅಲ್ಲ ಇವತ್ತೇ ‘ಡಿಜಿಟಲ್ ಸಖಿ ಪುಸ್ತಕ’ವನ್ನ ಬಿಡುಗಡೆ ಆಗಲಿದೆ.

Join Whatsapp