ವಯನಾಡಿನಿಂದ ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ

Prasthutha|

ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ವಯನಾಡಿನಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ನಾಮಪತ್ರ ಸಲ್ಲಿಸಿದ್ದಾರೆ.

- Advertisement -


ನಾಮಪತ್ರ ಸಲ್ಲಿಸುವ ಮುನ್ನ ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರೊಂದಿಗೆ ರೋಡ್ ಶೋ ನಡೆಸಿದರು ಮತ್ತು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.


ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ.ವೇಣುಗೋಪಾಲ್ ಹಾಗೂ ದೀಪಾ ದಾಸ್ ಮುನ್ಷಿ, ಕೇರಳ ವಿರೋಧ ಪಕ್ಷದ ನಾಯಕ ವಿ.ಡಿ.ಸತೀಸನ್ ಹಾಗೂ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷ ಎಂ.ಎಂ.ಹಸನ್ ಉಪಸ್ಥಿತರಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ವಯನಾಡಿನಲ್ಲಿ 10,92,197 ಮತಗಳ ಪೈಕಿ 7,06,367 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಸಿಪಿಐ ಅಭ್ಯರ್ಥಿ ಎರಡನೇ ಸ್ಥಾನದಲ್ಲಿದ್ದಾರೆ.

- Advertisement -



Join Whatsapp