ಭಾರತ್ ಜೋಡೋ ಯಾತ್ರೆ: ರಾಹುಲ್ ಗಾಂಧಿ ಜೊತೆ ಹೆಜ್ಜೆ ಹಾಕಿದ ಗೌರಿ ಲಂಕೇಶ್ ತಾಯಿ, ಸಹೋದರಿ

Prasthutha|


ಮಂಡ್ಯ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ರಾಜ್ಯದಲ್ಲಿ ಆರನೇ ದಿನಕ್ಕೆ ಕಾಲಿಟ್ಟಿದೆ. ಇಂದು ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿ ಇಂದಿರಾ ಲಂಕೇಶ್ ಹಾಗೂ ಸಹೋದರಿ ಕವಿತಾ ಲಂಕೇಶ್ ಪಾದಯಾತ್ರೆಯಲ್ಲಿ ಭಾಗವಹಿಸಿದ್ದಾರೆ.
ಮಂಡ್ಯ ಜಿಲ್ಲೆಯ ಬೆಳ್ಳೂರು ಕ್ರಾಸ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜತೆಗೆ ಇಂದಿರಾ ಹಾಗೂ ಕವಿತಾ ಲಂಕೇಶ್ ಅವರು ಹೆಜ್ಜೆಹಾಕಿದರು.

- Advertisement -


ಈ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಗೌರಿ ಸತ್ಯಕ್ಕಾಗಿ, ಧೈರ್ಯಕ್ಕಾಗಿ, ಸ್ವಾತಂತ್ರ್ಯಕ್ಕಾಗಿ ನಿಂತಳು. ಗೌರಿ ಲಂಕೇಶ್ ಮತ್ತು ಅವರಂತಹ ಅಸಂಖ್ಯಾತ ಇತರರು ಭಾರತದ ನಿಜವಾದ ಆತ್ಮವನ್ನು ಪ್ರತಿನಿಧಿಸುತ್ತಾರೆ. ಭಾರತ್ ಜೋಡೋ ಯಾತ್ರೆ ಅವರ ಧ್ವನಿಯಾಗಿದೆ. ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ’ ಎಂದು ಬರೆದುಕೊಂಡಿದ್ದಾರೆ.

Join Whatsapp