ನವದೆಹಲಿ: 2018ರ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಮಂಗಳವಾರ ಜಾಮೀನು ಮಂಜೂರಾಗಿದೆ.
- Advertisement -
2018 ರಲ್ಲಿ ಅಮಿತ್ ಶಾ ಅವರ ವಿರುದ್ಧ ಹೇಳಿಕೆಗಾಗಿ ಬಿಜೆಪಿ ನಾಯಕರೊಬ್ಬರು ಮಾನನಷ್ಟ ಪ್ರಕರಣ ದಾಖಲಿಸಿದ್ದರು. ಇದೇ ಪ್ರಕರಣವನ್ನು ಮಂಗಳವಾರ (ಫೆಬ್ರವರಿ 20) ಸುಲ್ತಾನ್ ಪುರದ ಸಂಸದ-ಶಾಸಕ ನ್ಯಾಯಾಲಯವು ವಿಚಾರಣೆ ನಡೆಸಿತು. ಬಳಿಕ ರಾಹುಲ್ ಗಾಂಧಿ ಅವರಿಗೆ ಜಾಮೀನು ಮಂಜೂರಾಗಿದೆ.