ರಾಹುಲ್ ಗಾಂಧಿ ಇದಕ್ಕೆಲ್ಲ ಹೆದರುವುದಿಲ್ಲ: ಪ್ರಿಯಾಂಕಾ ಗಾಂಧಿ

Prasthutha|

►ಈ ತೀರ್ಪನ್ನು ಒಪ್ಪುವುದಿಲ್ಲ ಎಂದ ಕೇಜ್ರಿವಾಲ್

- Advertisement -


ನವ ದೆಹಲಿ: ಪ್ರಧಾನಿ ಮೋದಿ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಗುಜರಾತ್’ನ ಸೂರತ್ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದು, ಇದರ ಬೆನ್ನಲ್ಲೇ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ರಾಹುಲ್ ಗಾಂಧಿ ಇಂಥದ್ದಕ್ಕೆಲ್ಲ ಯಾವತ್ತು ಹೆದರುವುದಿಲ್ಲ ಎಂದು ಹೇಳಿದ್ದಾರೆ.

ಕೇಂದ್ರ ಮತ್ತು ಅದರ ಮಿಷನರಿಗಳು, ದಂಡ, ಶಿಕ್ಷೆ ಮತ್ತು ತಾರತಮ್ಯದ ಮೂಲಕ ರಾಹುಲ್ ಗಾಂಧಿ ಧ್ವನಿಯನ್ನು ಹತ್ತಿಕ್ಕಲು ಯತ್ನಿಸುತ್ತಿದ್ದಾರೆ. ಆದರೆ ನನ್ನ ಸಹೋದರ ಇಂಥದ್ದಕ್ಕೆಲ್ಲ ಯಾವತ್ತು ಹೆದರುವುದಿಲ್ಲ. ಅವರು ಸತ್ಯವನ್ನು ಮಾತನಾಡುವುದನ್ನು ಮುಂದುವರಿಸುತ್ತಾರೆ. ಸತ್ಯದ ಶಕ್ತಿ ಮತ್ತು ಇಡೀ ದೇಶದ ಜನರ ಪ್ರೀತಿ-ಅಭಿಮಾನ ಅವರೊಂದಿಗೆ ಇದೆ ಎಂದು ಹೇಳಿದ್ದಾರೆ.

- Advertisement -

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕೂಡ ರಾಹುಲ್ ಗಾಂಧಿ ಪರ ಟ್ವೀಟ್ ಮಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ‘ಬಿಜೆಪಿಯೇತರ ಪಕ್ಷಗಳು ಮತ್ತು ನಾಯಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಷಡ್ಯಂತ್ರ ನಡೆಯುತ್ತಲೇ ಇದೆ. ನಮಗೂ ಕಾಂಗ್ರೆಸ್ ನೊಂದಿಗೆ ಭಿನ್ನಾಭಿಪ್ರಾಯವಿದೆ. ಆದರೆ ಈ ರೀತಿ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿಯನ್ನು ಸಿಲುಕಿಸಿರುವುದು ಸರಿಯಲ್ಲ. ಪ್ರಶ್ನಿಸುವುದು ಸಾರ್ವಜನಿಕರು ಮತ್ತು ಪ್ರತಿಪಕ್ಷಗಳ ಹಕ್ಕು. ನಾವು ನ್ಯಾಯಾಲಯವನ್ನು ಗೌರವಿಸುತ್ತೇವೆ, ಆದರೆ ಈ ತೀರ್ಪನ್ನು ಒಪ್ಪುವುದಿಲ್ಲ’ ಎಂದು ಟ್ವೀಟ್ ಮಾಡಿದ್ದಾರೆ.



Join Whatsapp