ಪ್ರಧಾನಿ ಅಭ್ಯರ್ಥಿಯಾಗಿ ಖರ್ಗೆ, ರಾಹುಲ್ ಗಾಂಧಿ ಆಯ್ಕೆ ಸಾಧ್ಯತೆ: ಶಶಿ ತರೂರ್

Prasthutha|

ಬೆಂಗಳೂರು: 2024ರ ಲೋಕಸಭೆ ಚುನಾವಣೆಯಲ್ಲಿ INDIA ಮೈತ್ರಿಕೂಟ ಅಧಿಕಾರಕ್ಕೆ ಬಂದರೆ, ಕಾಂಗ್ರೆಸ್ ಪಕ್ಷವು ಮಾಜಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅಥವಾ ಅದರ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭಾರತದ ಪ್ರಧಾನಿ ಸ್ಥಾನಕ್ಕೆ ನಾಮನಿರ್ದೇಶನ ಮಾಡಬಹುದು ಎಂದು ಕಾಂಗ್ರೆಸ್ ನ ಹಿರಿಯ ನಾಯಕ ಶಶಿ ತರೂರ್ ಹೇಳಿದ್ದಾರೆ.

- Advertisement -


US ಮೂಲದ ಮತ್ತು ಸಿಲಿಕಾನ್ ವ್ಯಾಲಿ-ಇನ್‌ಕ್ಯುಬೇಟೆಡ್ D2C ಮಾರುಕಟ್ಟೆ ವೇ ವೃತ್ತಿಪರರೊಂದಿಗೆ ನಡೆಸಿದ ಸಂವಾದದಲ್ಲಿ ಮಾತನಾಡಿದ ತರೂರ್, ಒಂದು ಪಕ್ಷವಲ್ಲದ ಸಮ್ಮಿಶ್ರ ಬಣವಾಗಿರುವ ಕಾರಣ, ಆ ಪಕ್ಷಗಳ ನಾಯಕರು ಒಟ್ಟಾಗಿ ಯಾರನ್ನಾದರೂ ಆರಿಸಬೇಕಾಗುತ್ತದೆ ಎಂದು ನಾನು ಭಾವಿಸುತ್ತೇನೆ. ಆದರೆ ನನ್ನ ಊಹೆ ಏನೆಂದರೆ, ಕಾಂಗ್ರೆಸ್ ಪಕ್ಷದಿಂದ, ಅದು ಭಾರತದ ಮೊದಲ ದಲಿತ ಪ್ರಧಾನಿಯಾಗಲಿರುವ ಖರ್ಗೆ ಅಥವಾ ರಾಹುಲ್ ಗಾಂಧಿ ಆಗಿರುವ ಸಾಧ್ಯತೆ ಇದೆ” ಎಂದು ಹೇಳಿದ್ದಾರೆ.

Join Whatsapp