ವಯನಾಡು, ರಾಯ್ ಬರೇಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮುನ್ನಡೆ ಸಾಧಿಸಿದ್ದಾರೆ.
ರಾಹುಲ್ ಗಾಂಧಿ ಕೇರಳದ ವಯನಾಡ್ ಮತ್ತು ಉತ್ತರ ಪ್ರದೇಶದ ರಾಯ್ ಬರೇಲಿ ಎರಡು ಕ್ಷೇತ್ರಗಳಿಂದ ಸ್ಪರ್ಧಿಸುತ್ತಿದ್ದಾರೆ. ರಾಯ್ ಬರೇಲಿ ಯಲ್ಲಿ ರಾಹುಲ್ ಗಾಂಧಿ ಬಿಜೆಪಿಯ ದಿನೇಶ್ ಪ್ರತಾಪ್ ಸಿಂಗ್ ಅವರನ್ನು ಎದುರಿಸುತ್ತಿದ್ದರೆ, ವಯನಾಡ್ ನಲ್ಲಿ ಬಿಜೆಪಿಯ ಕೆ ಸುರೇಂದ್ರನ್ ಮತ್ತು ಹಿರಿಯ ಸಿಪಿಐ ನಾಯಕಿ ಅನ್ನಿ ರಾಜಾ ಕಣದಲ್ಲಿದ್ದಾರೆ.