ಚಂಡೀಗಢ: ಕೊಲೆಗೀಡಾಗಿರುವ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಕುಟುಂಬದ ಸದಸ್ಯರನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಮಾಡಿದ್ದಾರೆ.
ಚಂಡೀಗಢದ ಮಾನ್ಸಾದಲ್ಲಿ ರಾಹುಲ್ ಗಾಂಧಿ ಮೂಸೆವಾಲಾ ಕುಟುಂಬವನ್ನು ಭೇಟಿ ಮಾಡಿ ಸಂತಾಪ ಸೂಚಿಸಿದ್ದಾರೆ.
ಮೇ 29ರಂದು ಪಂಜಾಬ್ ನಲ್ಲಿ ಸಿಧು ಮೂಸೆವಾಲಾ ಹತ್ಯೆ ನಡೆದಿತ್ತು. ಈ ಪ್ರಕರಣ ಪಂಜಾಬ್ ರಾಜಕೀಯ ವಲಯದಲ್ಲಿ ಹೆಚ್ಚು ಚರ್ಚೆಗೆ ಗ್ರಾಸವಾಗಿದ್ದು, ರಾಜಕೀಯ ಬಣ್ಣ ಸಹ ಪಡೆದುಕೊಂಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಂಜಾಬ್ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.
ಸಿಧು ಮೂಸೆವಾಲಾ ಕುಟುಂಬವನ್ನು ಭೇಟಿ ಮಾಡಿದ ರಾಹುಲ್ ಗಾಂಧಿ
Prasthutha|