Home ಟಾಪ್ ಸುದ್ದಿಗಳು ‘ಇದು ಸಾವೋ ಅಥವಾ ಕೊಲೆಯೋ?’ : ಚಾಮರಾಜನಗರ ಘಟನೆ ಕುರಿತು ರಾಹುಲ್ ಗಾಂಧಿ ಆಕ್ರೋಶ

‘ಇದು ಸಾವೋ ಅಥವಾ ಕೊಲೆಯೋ?’ : ಚಾಮರಾಜನಗರ ಘಟನೆ ಕುರಿತು ರಾಹುಲ್ ಗಾಂಧಿ ಆಕ್ರೋಶ

ಮೈಸೂರು : ಇದು ಸಾವೋ ಅಥವಾ ಕೊಲೆಯೋ? ವ್ಯವಸ್ಥೆ ಎಚ್ಚರಗೊಳ್ಳುವ ಮೊದಲು ಇನ್ನು ಇಂತಹ ಎಷ್ಟು ಸಾವು ನೋವುಗಳು ಸಂಭವಿಸುತ್ತವೋ ಎಂದು ಆಕ್ಸಿಜನ್ ಕೊರತೆಯುಂಟಾಗಿ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಪ್ರತಿಕ್ರಿಯಿಸಿ ರಾಹುಲ್ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 ರಾಜ್ಯದಲ್ಲಿ ಕೊರೋನಾ ಅಟ್ಟಹಾಸದಿಂದಾಗಿ ಆಕ್ಸಿಜನ್ ಕೊರತೆಯುಂಟಾಗಿ ಚಾಮರಾಜನಗರದ ಜಿಲ್ಲಾ ಆಸ್ಪತ್ರೆಯಲ್ಲಿ 24 ಮಂದಿ ಸಾವನ್ನಪ್ಪಿದ್ದು, ಇದು ಜಿಲ್ಲಾಡಳಿತದ ಬೇಜವಾಬ್ದಾರಿಯಿಂದ ನಡೆದಿರುವ ಘಟನೆ ಎಂದು ದೇಶಾದ್ಯಂತ ಆಕ್ರೋಶಗಳು ವ್ಯಕ್ತವಾಗುತ್ತಿವೆ.

ಈ ಕುರಿತು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಇದು ಸಾವೋ ಅಥವಾ ಕೊಲೆಯೋ ಎಂದು ಪ್ರಶ್ನಿಸಿದ್ದಾರೆ. ವ್ಯವಸ್ಥೆ ಎಚ್ಚರಗೊಳ್ಳುವ ಮೊದಲು ಇನ್ನು ಇಂತಹ ಎಷ್ಟು ಸಾವು ನೋವುಗಳು ಸಂಭವಿಸುತ್ತವೋ. ಸಾವನ್ನಪ್ಪಿರುವರ ಕುಟುಂಬಗಳಿಗೆ ಸಂತಾಪ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

Join Whatsapp
Exit mobile version