ಹೊಸದಿಲ್ಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 73ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ದೆಹಲಿಯ ರಾಜ್ ಘಾಟ್ ನಲ್ಲಿ ಇಂದು(ಶನಿವಾರ) ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿಯವರೊಂದಿಗೆ ಗಾಂಧೀಜಿಯವರ ಸ್ಮಾರಕಕ್ಕೆ ಪುಷ್ಪನಮನ ಸಲ್ಲಿಸಿದರು.
ಜನವರಿ 30 ಮಹಾತ್ಮ ಗಾಂಧೀಜಿಯವರು ಹುತಾತ್ಮರಾದ ದಿನ. ರಾಷ್ಟ್ರಪಿತ ನಾಥುರಾಮ್ ಗೋಡ್ಸೆ ಗುಂಡಿಗೆ ಬಲಿಯಾದ ದಿನವಾಗಿದೆ. ಪ್ರತೀ ವರ್ಷ ಈ ದಿನವನ್ನು ಹುತಾತ್ಮರ ದಿನವನ್ನಾಗಿ ದೇಶದಾದ್ಯಂತ ಆಚರಣೆ ಮಾಡಲಾಗುತ್ತಿದೆ.