ಬೆಲೆ ಏರಿಕೆ ವಿರುದ್ಧ ಪ್ರತಿಭಟನೆ: ರಾಹುಲ್, ಪ್ರಿಯಾಂಕಾ ಗಾಂಧಿ ಬಂಧನ

Prasthutha|

ನವದೆಹಲಿ: ನಿರುದ್ಯೋಗ ಮತ್ತು ಆಹಾರ ಪದಾರ್ಥಗಳ ಮೇಲಿನ ಜಿಎಸ್ ಟಿಗೆ ಸಂಬಂಧಿಸಿದಂತೆ ಕೇಂದ್ರದ ವಿರುದ್ಧದ ಪಕ್ಷದ ರಾಷ್ಟ್ರವ್ಯಾಪಿ ಪ್ರತಿಭಟನೆಯ ನಡುವೆ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಮತ್ತು ಶಶಿ ತರೂರ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು, ಸಂಸದರನ್ನು ಶುಕ್ರವಾರ ಪೊಲೀಸರು ಬಂಧಿಸಿದ್ದಾರೆ.

- Advertisement -

ಬೆಲೆ ಏರಿಕೆ ಮತ್ತು ನಿರುದ್ಯೋಗ ಹೆಚ್ಚಳ ವಿರೋಧಿಸಿ ಕಾಂಗ್ರೆಸ್ ಶುಕ್ರವಾರ ರಾಷ್ಟ್ರವ್ಯಾಪಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಜಂತರ್ ಮಂತರ್ ಹೊರತುಪಡಿಸಿ ನವದೆಹಲಿ ಪ್ರದೇಶದಾದ್ಯಂತ ಹಲವಾರು ಸ್ಥಳಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಮತ್ತು ಸೆಕ್ಷನ್ 144 ಅನ್ನು ವಿಧಿಸಲಾಗಿದೆ.

ಏತನ್ಮಧ್ಯೆ, ದೇಶಾದ್ಯಂತ ಇತರ ಸ್ಥಳಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಪ್ರತಿ ರಾಜಧಾನಿಯಲ್ಲೂ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಮುಂಬೈನಲ್ಲಿ ಕೆಲವು ಕಾಂಗ್ರೆಸ್ ನಾಯಕರನ್ನು ಆಝಾದ್ ಮೈದಾನ್ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಗಿದೆ.

- Advertisement -

ಪ್ರಿಯಾಂಕಾ ಅವರನ್ನು ಸುತ್ತುವರಿದು ಪೊಲೀಸರು ಎಳೆದಾಡುತ್ತಿರುವ ವೀಡಿಯೋ ವೈರಲ್ ಆಗಿದೆ.

Join Whatsapp