ರೈತ ಹೋರಾಟದಲ್ಲಿ ಮಡಿದವರಿಗೆ ಪರಿಹಾರ ಒದಗಿಸಲು ರಾಹುಲ್ ಗಾಂಧಿ ಒತ್ತಾಯ

Prasthutha|

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದಂತೆ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಆಂದೋಲನದ ವೇಳೆ ಪ್ರಾಣ ಕಳೆದುಕೊಂಡ ರೈತರ ಕುಟುಂಬಗಳಿಗೆ ಸೂಕ್ತ ಪರಿಹಾರ ಒದಗಿಸಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಂಗಳವಾರ ಸಂಸತ್ತಿನಲ್ಲಿ ಒತ್ತಾಯಿಸಿದ್ದಾರೆ.

- Advertisement -

ಸಂಸತ್ತಿನ ಶೂನ್ಯ ವೇಳೆಯಲ್ಲಿ ಈ ಕುರಿತು ಪ್ರಸ್ತಾಪಿಸಿದ ರಾಹುಲ್ ಗಾಂಧಿ, ವರ್ಷಗಳ ಕಾಲ ನಡೆದ ಆಂದೋಲನದ ಸಂದರ್ಭದಲ್ಲಿ ರೈತರ ಸಾವಿನ ಅಂಕಿಅಂಶಗಳನ್ನು ಬಹಿರಂಗಪಡಿಸದ ಮೋದಿ ಸರ್ಕಾರದ ನಡೆಯನ್ನು ಅವರು ತರಾಟೆಗೆ ತೆಗೆದುಕೊಂಡರು.

ಮಾತ್ರವಲ್ಲ ಪಂಜಾಬ್, ಹರ್ಯಾಣದಲ್ಲಿ ಮೃತಪಟ್ಟ ರೈತರ ಪಟ್ಟಿಯನ್ನು ಅವರು ಸದನದಲ್ಲಿ ಬಿಡುಗಡೆಗೊಳಿಸಿದರು. ಕೃಷಿ ವಿರುದ್ಧದ ಆಂದೋಲನದಲ್ಲಿ ಸುಮಾರು 700 ರೈತರು ಸಾವನ್ನಪ್ಪಿದ್ದಾರೆ ಎಂದು ಈ ವೇಳೆ ಸದನಕ್ಕೆ ಮಾಹಿತಿ ನೀಡಿದರು.

- Advertisement -

ಈ ಮಧ್ಯೆ ಪಂಜಾಬ್ ಸರ್ಕಾರ ಈಗಾಗಲೇ 400 ರೈತರ ಕುಟುಂಬಗಳಿಗೆ ಐದು ಲಕ್ಷ ಪರಿಹಾರವನ್ನು ನೀಡಿದ್ದು, 152 ಮಂದಿಗೆ ಸರ್ಕಾರಿ ಉದ್ಯೋಗವನ್ನು ನೀಡಲಾಗಿದೆ ಎಂದು ಅವರು ಸಾಂದರ್ಭಿಕವಾಗಿ ತಿಳಿಸಿದರು.

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ನಡೆಸಿದ ಆಂದೋಲನದ ಬಗ್ಗೆ ಸರ್ಕಾರ ಪ್ರತಿಕ್ರಿಯೆ ನೀಡಬೇಕೆಂದು ಒತ್ತಾಯಿಸಿ ಪ್ರತಿಪಕ್ಷಗಳಾದ ಕಾಂಗ್ರೆಸ್, ಎನ್.ಸಿ.ಪಿ ಮತ್ತು ಡಿಎಂಕೆ ಸದಸ್ಯರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕಲಾಪ ಬಹಿಷ್ಕರಿಸಿ ಹೊರನಡೆದರು.

Join Whatsapp