ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದೆ. ಇದೇ ವೇಳೆ ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಖಾತೆಯ ಬಯೊ ಮಾಹಿತಿಯನ್ನು ಬದಲಾವಣೆ ಮಾಡಿಕೊಂಡಿದ್ದಾರೆ.
ಮಾರ್ಚ್‌ನಲ್ಲಿ ಲೋಕಸಭೆಯಿಂದ ಅನರ್ಹಗೊಂಡ ನಂತರ, ರಾಹುಲ್ ಗಾಂಧಿ ಅವರು ತಮ್ಮ ಟ್ವಿಟರ್ ಬಯೋವನ್ನು ‘Dis’Qualified MP’ ಎಂದು ಹಾಕಿಕೊಂಡಿದ್ದರು. ಇದೀಗ, ಹಿಂದಿನ ಬಯೋವನ್ನು ‘Member of Parliament’ ಎಂದು ಬದಲಾಯಿಸಿದ್ದಾರೆ.
ಸುಪ್ರೀಂ ತೀರ್ಪಿನ ನಂತರ ಲೋಕಸಭೆ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು, ರಾಹುಲ್ ಗಾಂಧಿಯವರ ಸದಸ್ಯತ್ವದ ಅನರ್ಹತೆಯನ್ನು ಹಿಂಪಡೆದಿದ್ದು, ಸದಸ್ಯತ್ವವನ್ನು ಮರುಸ್ಥಾಪಿಸಲಾಗಿದೆ ಎಂದು ತಿಳಿಸಿದೆ.
Congress leader Rahul Gandhi updates his Twitter account bio from 'Dis'Qualified MP' to 'Member of Parliament' after Lok Sabha Secretariat restored his membership today.
— ANI (@ANI) August 7, 2023
Supreme Court on Friday (August 4) stayed his conviction in the ‘Modi’ surname remark case. pic.twitter.com/ehQjMywEms