Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲಿ: ಶಶಿ ತರೂರ್

ರಾಹುಲ್ ಗಾಂಧಿ ವಿರೋಧ ಪಕ್ಷದ ನಾಯಕರಾಗಲಿ: ಶಶಿ ತರೂರ್

ನವದೆಹಲಿ: ಲೋಕಸಭೆ ಚುನಾವಣೆಯಲ್ಲಿ ರಾಹುಲ್ ಗಾಂಧಿ ‘ಮ್ಯಾನ್ ಆಫ್ ದಿ ಮ್ಯಾಚ್’ ಆಗಿದ್ದಾರೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಪ್ರಶಂಸಿಸಿದ್ದಾರೆ.


‘ರಾಹುಲ್ ಹಾಗೂ ಮಲ್ಲಿಕಾರ್ಜುನ ಖರ್ಗೆ ದೇಶದಾದ್ಯಂತ ವ್ಯಾಪಕ ಪ್ರಚಾರ ನಡೆಸಿದ್ದಾರೆ. ಖರ್ಗೆ ಅವರು ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಾಗಾಗಿ ರಾಹುಲ್ ಗಾಂಧಿ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಹುದ್ದೆ ವಹಿಸುವುದು ಸೂಕ್ತವೆನಿಸಲಿದೆ. ಈ ವಿಷಯದಲ್ಲಿ ಖಂಡಿತವಾಗಿಯೂ ನನ್ನ ಅಭಿಪ್ರಾಯ ತಿಳಿಸಿದ್ದೇನೆ’ ಎಂದು ಹೇಳಿದ್ದಾರೆ.
ಲೋಕಸಭೆಯಲ್ಲಿ ಬಿಜೆಪಿ ಬಳಿಕ 99 ಸ್ಥಾನಗಳನ್ನು ಗೆದ್ದಿರುವ ಕಾಂಗ್ರೆಸ್, ಎರಡನೇ ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಅಲ್ಲದೆ ಆಡಳಿತ ಪಕ್ಷವನ್ನು ಎದುರಿಸಲು ಹೆಚ್ಚಿನ ಸಂಖ್ಯಾ ಬಲ ಹೊಂದಿರುವ ಪಕ್ಷದ ಜನಪ್ರಿಯ ನಾಯಕ ವಿಪಕ್ಷದ ಸ್ಥಾನ ವಹಿಸುವುದು ಹೆಚ್ಚು ಸೂಕ್ತವೆನಿಸಲಿದೆ ಎಂದು ಅವರು ಹೇಳಿದ್ದಾರೆ.

Join Whatsapp
Exit mobile version