ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಿಲ್ಲಿಸಬೇಕು ಎಂದ ಕಾಂಗ್ರೆಸ್ ಸಂಸದ

Prasthutha|

ಪಣಜಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾರತ ಜೋಡೋ ಯಾತ್ರೆಯನ್ನು ನಿಲ್ಲಿಸಿ, ಹಿಮಾಚಲ ಪ್ರದೇಶ ಮತ್ತು ಗುಜರಾತ್ ಗೆ ಹೋಗಬೇಕು ಎಂದು ಕಾಂಗ್ರೆಸ್ ಸಂಸದ, ಗೋವಾದ ಮಾಜಿ ಸಿಎಂ ಫ್ರಾನ್ಸಿಸ್ಕೊ ಸರ್ಡಿನಾ ಹೇಳಿದ್ದಾರೆ.

- Advertisement -


ಹಿಮಾಚಲ ಪ್ರದೇಶ ವಿಧಾನಸಭೆಗೆ ಚುನಾವಣೆ ಘೋಷಣೆಯಾಗಿದ್ದು, ಪ್ರಚಾರ ಅಭಿಯಾನ ಬಿರುಸುಗೊಂಡಿದೆ. ಗುಜರಾತ್ ಗೆ ವಿಧಾನಸಭೆಗೆ ಯಾವುದೇ ಕ್ಷಣದಲ್ಲಿ ಚುನಾವಣೆ ಘೋಷಣೆಯಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಸಂಸದ ಫ್ರಾನ್ಸಿಸ್ಕೊ ಸರ್ಡಿನಾ, ರಾಹುಲ್ ಗಾಂಧಿಯವರು ಭಾರತ್ ಜೋಡೋ ಯಾತ್ರೆಯನ್ನು ನಿಲ್ಲಿಸಿ ಹಿಮಾಚಲ ಪ್ರದೇಶ ಮತ್ತು ಗುಜರಾತ್ ಗೆ ಹೋಗಬೇಕು. ಅಲ್ಲಿ ಸಾರ್ವಜನಿಕರನ್ನು ಜಾಗೃತಗೊಳಿಸಬೇಕು. ಆಗ ಮಾತ್ರ ಬಿಜೆಪಿಯನ್ನು ಸೋಲಿಸಬಲ್ಲ ಏಕೈಕ ಪಕ್ಷವಾದ ಕಾಂಗ್ರೆಸ್ ಗೆ ಮತ ಸಿಗಲು ಸಾಧ್ಯ. ಬಿಜೆಪಿಗೆ ಪ್ರಬಲ ಪ್ರತಿಸ್ಪರ್ಧಿ ಕಾಂಗ್ರೆಸ್ ಮಾತ್ರ ಎಂದು ತಿಳಿಸಿದ್ದಾರೆ.



Join Whatsapp