Home ಟಾಪ್ ಸುದ್ದಿಗಳು ಅನಾರೋಗ್ಯದ ಕಾರಣ ಕಾಂಗ್ರೆಸ್‌ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರು: ಸಿಎಂ ಸಿದ್ದರಾಮಯ್ಯ

ಅನಾರೋಗ್ಯದ ಕಾರಣ ಕಾಂಗ್ರೆಸ್‌ ಅಧಿವೇಶನಕ್ಕೆ ರಾಹುಲ್ ಗಾಂಧಿ ಗೈರು: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಅನಾರೋಗ್ಯ ಉಂಟಾದ ಕಾರಣ ಅವರು ಅಧಿವೇಶನಕ್ಕೆ ಹಾಜರಾಗಲು ಸಾಧ್ಯವಾಗಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ರಾಹುಲ್ ಸಮಾವೇಶದಿಂದ ದೂರ’ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೀತಿ ತಿರುಚಿ ಸುದ್ದಿ ಹಾಕಿದರೆ ಪತ್ರಿಕಾ ವೃತ್ತಿಯ ಘನತೆ ಉಳಿಯುತ್ತದೆಯೇ? ಇದರಿಂದ ಏನು ಸಂದೇಶ ಹೋಗುತ್ತದೆ’ ಎಂದೂ ಪ್ರಶ್ನಿಸಿದರು.

‘ಸಂಸದೆ ಪ್ರಿಯಾಂಕ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾರ್ಯಕಾರಿ ಸಮಿತಿ ಸದಸ್ಯರು, ಕಾರ್ಯದರ್ಶಿಗಳು ಆಗಮಿಸಲಿದ್ದು, ಸಂಭ್ರಮ ಇಮ್ಮಡಿಸಿದೆ’ ಎಂದು ತಿಳಿಸಿದರು.

Join Whatsapp
Exit mobile version