Home ಟಾಪ್ ಸುದ್ದಿಗಳು ರಾಹುಲ್ ಗಾಂಧಿ ಭಾಷಣ ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ: ಉತ್ತರಾಖಂಡದ ಜ್ಯೋತಿರ್ ಮಠದ ಸ್ವಾಮೀಜಿ

ರಾಹುಲ್ ಗಾಂಧಿ ಭಾಷಣ ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ: ಉತ್ತರಾಖಂಡದ ಜ್ಯೋತಿರ್ ಮಠದ ಸ್ವಾಮೀಜಿ

ಉತ್ತರಾಖಂಡ್: ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಮಾಡಿದ ಭಾಷಣಕ್ಕೆ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ಕಿಡಿಗಾರುತ್ತಿರುವುದರ ಮಧ್ಯೆ ಉತ್ತರಾಖಂಡದ ಜ್ಯೋತಿರ್ ಮಠದ 46 ನೇ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ವಿಪಕ್ಷ ನಾಯಕನಿಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಾಹುಲ್ ಗಾಂಧಿ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸ್ವಾಮೀಜಿ, ರಾಹುಲ್ ಗಾಂಧಿಯವರ ಭಾಷಣವು ಹಿಂದೂ ಧರ್ಮಕ್ಕೆ ವಿರುದ್ಧವಾಗಿಲ್ಲ ಎಂದು ಪ್ರತಿಪಾದಿಸಿದ್ದಾರೆ.

ನಾವು ರಾಹುಲ್ ಗಾಂಧಿಯವರ ಸಂಪೂರ್ಣ ಭಾಷಣವನ್ನು ಕೇಳಿದ್ದೇವೆ. ಅವರು ಹಿಂದೂ ಧರ್ಮದಲ್ಲಿ ಹಿಂಸೆಗೆ ಸ್ಥಳವಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಅದೇ ನಿಜ. ರಾಹುಲ್ ಅವರ ಹೇಳಿಕೆಯ ಒಂದು ಭಾಗವನ್ನು ಮಾತ್ರ ಹರಡುವುದು ಸರಿಯಲ್ಲ ಮತ್ತು ಅದಕ್ಕೆ ಕಾರಣರಾದವರಿಗೆ ಶಿಕ್ಷೆಯಾಗಬೇಕು ಎಂದು ಸ್ವಾಮೀಜಿ ಹೇಳಿದ್ದಾರೆ.

ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಬಿಜೆಪಿ ನಾಯಕರು ಮತ್ತು ಆರ್ ಎಸ್ ಎಸ್ ವಿರುದ್ಧ ಕಿಡಿ ಕಾರಿ, ಹಿಂದೂಗಳು ಎಂದು ಹೇಳಿಕೊಳ್ಳುವವರು ಹಗಲಿರುಳು ಹಿಂಸಾಚಾರ ಮತ್ತು ದ್ವೇಷದಲ್ಲಿ ತೊಡಗಿದ್ದಾರೆ ಎಂದು ಹೇಳಿದ್ದರು. ಇದನ್ನು ಪ್ರಧಾನಿ ಮೋದಿ ಸಹಿತ ಬಿಜೆಪಿ ನಾಯಕರು ವಿವಾದಾಸ್ಪದ ಎಂದು ಬಿಂಬಿಸಿದ್ದಾರೆ. ಬಿಜೆಪಿ ನಾಯಕರು ದೇಶಾದ್ಯಂತ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

Join Whatsapp
Exit mobile version