ಸಮುದ್ರಕ್ಕೆ ಜಿಗಿದು ಅಚ್ಚರಿ ಮೂಡಿಸಿದ ರಾಹುಲ್ ಗಾಂಧಿ!

Prasthutha: February 25, 2021

ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ನಡುವೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಥಳೀಯ ಜನರೊಂದಿಗೆ ಬೆರೆಯುವ ನಿಟ್ಟಿನಲ್ಲಿ ಹೆಚ್ಚೆಚ್ಚು ಕಾರ್ಯನಿರತರಾಗಿದ್ದಾರೆ. ಕೊಲ್ಲಮ್ ಜಿಲ್ಲೆಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಸಮುದ್ರಕ್ಕೆ ಜಿಗಿದು ಈಜಾಡಿದ ದೃಶ್ಯ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

ನಿನ್ನೆ ಕೊಲ್ಲಂ ಜಿಲ್ಲೆಗೆ ಕಾಂಗ್ರೆಸ್ ನಾಯಕರೊಂದಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅಲ್ಲಿ ತಂಗಸ್ಸೇರಿ ಸಮುದ್ರದಲ್ಲಿ ತಮ್ಮ ಕೆಲವು ಸ್ನೇಹಿತರು ಹಾಗೂ ಮೀನುಗಾರರೊಂದಿಗೆ ಸುಮಾರು 10 ನಿಮಿಷಗಳ ಕಾಲ ಈಜಾಡಿದ್ದಾರೆ.

ಸಮುದ್ರ ತೀರಕ್ಕೆ ಆಗಮಿಸಿದ ರಾಹುಲ್ ಗಾಂಧಿಯವರು ಕೆಲವು ಮೀನುಗಾರರು ಮೀನು ಹಿಡಿಯಲು ಬಲೆ ಬೀಸಿ ಸಮುದ್ರಕ್ಕೆ ಜಿಗಿದರು. ಅವರೊಟ್ಟಿಗೆ ರಾಹುಲ್ ಗಾಂಧಿ ಸಹ ದೋಣಿಯಿಂದ ನೀರಿಗೆ ಜಿಗಿದರು.

ನಮಗೆ ಅವರು ಸಮುದ್ರಕ್ಕಿಳಿಯುತ್ತಾರೆ ಎಂದು ಗೊತ್ತಿರಲಿಲ್ಲ. ನಮಗೆಲ್ಲಾ ಒಂದು ಕ್ಷಣ ಅಚ್ಚರಿಯಾಯಿತು. ಆದರೆ, ರಾಹುಲ್ ಗಾಂಧಿಯವರು ಆರಾಮಾಗಿದ್ದರು. ಸಮುದ್ರ ನೀರಿನಲ್ಲಿ 10 ನಿಮಿಷ ಈಜಿದರು. ಅವರಿಗೆ ಈಜಲು ಚೆನ್ನಾಗಿ ಗೊತ್ತಿದೆ ಎಂದು ಪಕ್ಷದ ಕಾರ್ಯಕರ್ತರೊಬ್ಬರು ಹೇಳಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!